RRB Recruitment‌ 2026 : ಪದವೀಧರರಿಗೆ ಭರ್ಜರಿ ಜಾಬ್‌ ಆಫರ್

RRB Recruitment‌ 2026: ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ರೈಲ್ವೆ ಇಲಾಖೆಯಲ್ಲಿ ತಯಾರಿ ನಡೆಸುತ್ತಿರುವ ಯುವಕರಿಗೆ ರೈಲ್ವೆ ನೇಮಕಾತಿ ಮಂಡಳಿ ಸುವರ್ಣಾವಕಾಶ ಒದಗಿಸಿದೆ. ಆಸಕತ್‌ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು.ಆರ್‌ಆರ್‌ಬಿ ಪ್ರಕಟಿಸಿರುವ ಮಾಹಿತಿ ಪ್ರಕಾರ, ಹುದ್ದೆಗಳ ವಿವರ ಇಲ್ಲಿದೆ.


ನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ


* ಜೂನಿಯರ್ ಹಿಂದಿ ಅನುವಾದಕರು: ಒಟ್ಟು 202 ಹುದ್ದೆಗಳು.
* ಮುಖ್ಯ ಕಾನೂನು ಸಹಾಯಕ ಹುದ್ದೆಗಳು: 22
* ಸಾರ್ವಜನಿಕ ಅಭಿಯೋಜಕರು: 7
* ಸೀನಿಯರ್ ಪಬ್ಲಿಕ್ ಇನ್ಸ್‌ಪೆಕ್ಟರ್‌ಗಳಿಗೆ 15
* ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕರಿಗೆ 24 ಹುದ್ದೆಗಳು.

ತಾಂತ್ರಿಕ ಮತ್ತು ವೈಜ್ಞಾನಿಕ ವಿಭಾಗ:
* ವೈಜ್ಞಾನಿಕ ಸಹಾಯಕ: 2
* ಲ್ಯಾಬ್ ಅಸಿಸ್ಟೆಂಟ್ ಗ್ರೇಡ್: 3
* ವೈಜ್ಞಾನಿಕ ಮೇಲ್ವಿಚಾರಕರು: 1 ಹುದ್ದೆಗಳು ಲಭ್ಯವಿದೆ.

ಶೈಕ್ಷಣಿಕ ಅರ್ಹತೆ:
* ಜೂನಿಯರ್ ಹಿಂದಿ ಅನುವಾದಕ ಹುದ್ದೆಗೆ: ಪದವಿ
* ಮುಖ್ಯ ಕಾನೂನು ಸಹಾಯಕ ಹಾಗೂ ಸಾರ್ವಜನಿಕ ಅಭಿಯೋಜಕ ಹುದ್ದೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ
* ತಾಂತ್ರಿಕ ಮತ್ತು ವೈಜ್ಞಾನಿಕ ಹುದ್ದೆ:ವಿಜ್ಞಾನದಲ್ಲಿ ಪದವಿ ಅಥವಾ ಡಿಪ್ಲೊಮಾ ಅರ್ಹತೆಗಳು ಮುಖ್ಯವಾಗುತ್ತದೆ.


ನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ


ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು. ಹುದ್ದೆ ಅನುಗುಣವಾಗಿ ಗರಿಷ್ಠ ವಯೋಮಿತಿ 30 ರಿಂದ 40 ವರ್ಷಗಳವರೆಗೆ ನಿಗದಿಯಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಮೀಸಲು ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆ ಅನುಗುಣವಾಗಿ ಆಕರ್ಷಕ ವೇತನ ನೀಡಲಾಗುತ್ತದೆ. ಹಲವಾರು ಹುದ್ದೆಗಳಿಗೆ ತಿಂಗಳಿಗೆ ರೂ. 35,400 ಮೂಲ ವೇತನವಿದ್ದರೆ, ಮುಖ್ಯ ಕಾನೂನು ಸಹಾಯಕ ಸೇರಿದಂತೆ ಹಿರಿಯ ಹುದ್ದೆಗಳಿಗೆ ತಿಂಗಳಿಗೆ ರೂ. 44,900 ವರೆಗೆ ವೇತನ ಲಭ್ಯವಿದೆ. ಇದಲ್ಲದೆ, ತುಟ್ಟಿಭತ್ಯೆ ಮನೆ ಬಾಡಿಗೆ ಭತ್ಯೆ , ಪ್ರಯಾಣ ಭತ್ಯೆ ಸೇರಿದಂತೆ ಇತರೆ ಸರ್ಕಾರಿ ಸೌಲಭ್ಯಗಳು ಸಹ ದೊರೆಯುತ್ತವೆ.

ಶುಲ್ಕ:
* ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು: ಅರ್ಜಿ ಶುಲ್ಕ ರೂ.500
* ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು: ರೂ. 250

ರೈಲ್ವೆ ಕ್ಷೇತ್ರದಲ್ಲಿ ಭದ್ರ ಮತ್ತು ಗೌರವಾನ್ವಿತ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹರು ಕೊನೆಯ ದಿನಾಂಕ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ರೈಲ್ವೆ ನೇಮಕಾತಿ ಮಂಡಳಿ ಸಲಹೆ ನೀಡಿದೆ.

RRB Recruitment‌ 2026 : ಪದವೀಧರರಿಗೆ ಭರ್ಜರಿ ಜಾಬ್‌ ಆಫರ್
RRB Recruitment‌ 2026 : ಪದವೀಧರರಿಗೆ ಭರ್ಜರಿ ಜಾಬ್‌ ಆಫರ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (RRB Recruitment‌ 2026:)

    1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
    2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
    3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
    4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
    5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ