RTC Aadhaar Link: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ

(RTC Aadhaar Link) ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ ರೈತರು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೌದು, ಸರ್ಕಾರದ ಸೌಲಭ್ಯಗಳನ್ನು ರೈತರು ಸುಲಭವಾಗಿ ಪಡೆಯಬೇಕಾದರೆ RTC ದಾಖಲೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸಬೇಕು. ಈ ಕುರಿತು ಆದೇಶ ಹೊರಡಿಸಿದೆ.


ಇದನ್ನೂ ಓದಿ: ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್..!; ಮಹತ್ವದ ಆದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ!


ಆಧಾರ್ ಕಾರ್ಡ್ ಸಂಖ್ಯೆ ಜೋಡಣೆಗೆ ಸರ್ಕಾರದ ಹೊಸ ತಂತ್ರಾಂಶ ಸಿದ್ದಪಡಿಸಿದ. ಇನ್ನು ಮುಂದೆ ಸರ್ಕಾರದ ಯಾವುದೇ ಸೌಲಭ್ಯ ಪಡೆಯಬೇಕಾದರೆ ರೈತರು ಈ ಹೊಸ ಪದ್ಧತಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ? ಇದಕ್ಕೆ ಯಾವ ಯಾವ ದಾಖಲೆ ಬೇಕು? ರೈತರು ಸ್ವತಃ ಮೊಬೈಲ್ ನಲ್ಲೇ ಲಿಂಕ್ ಮಾಡಬಹುದೇ? ಆಧಾರ್ ಕಾರ್ಡ್ ಸಂಖ್ಯೆಯನ್ನು ಪಹಣಿಕೆ ಏಕೆ ಲಿಂಕ್ ಮಾಡಬೇಕು.? ಇದರಿಂದ ಏನು ಪ್ರಯೋಜನ ಏನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಎಲ್ಲಿ ಪಹಣಿ ಜೊತೆ ಆಧಾರ್ ಲಿಂಕ್ ಮಾಡಿಸುವುದು?:
ರೈತರು ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಲಿಂಕ್ ಮಾಡಬಹುದು ಅಥವಾ ತಮ್ಮ ಗ್ರಾಮ ಲೆಕ್ಕಿಗರ ಕಚೇರಿಗೆ ಭೇಟಿ ನೀಡಿಯೂ ಕೂಡ ಲಿಂಕ್ ಮಾಡಿಸಬಹುದಾಗಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ಹೂಡಿಕೆದಾರರಿಗೆ ಲಕ್ಷ ಲಕ್ಷ ಲಾಭ..!; ಷೇರು ಮಾರುಕಟ್ಟೆ ಹೀಗೆ ಓಡ್ತಿರೋದ್ಯಾಕೆ..?; ಇಲ್ಲಿದೆ ನಾಲ್ಕು ಬೆಸ್ಟ್ ಷೇರುಗಳು..!


ಪಹಣಿ- ಆಧಾರ್ ಲಿಂಕ್ ಮಾಡುವ ಸುಲಭ ವಿಧಾನ:
ನಿಮ್ಮ ಜಮೀನಿನ ಪಹಣಿ (RTC) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ತುಂಬಾ ಸುಲಭ! ಕೆಲವೇ ಕ್ಲಿಕ್ ಗಳಲ್ಲಿ ನೀವು ಈ ಕೆಲಸವನ್ನು ಮನೆಯಿಂದಲೇ ಮಾಡಬಹುದು.

* https://landrecords.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ
* ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು Captcha Code ನ್ನು ಭರ್ತಿ ಮಾಡಿ
* Send OTP ಮೇಲೆ ಕ್ಲಿಕ್ ಮಾಡಿ OTP ಯನ್ನು ನಮೂದಿಸಿ.
* ನಿಮ್ಮ ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರನ್ನು ಭರ್ತಿ ಮಾಡಿ.
* ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ ಎಂಬ ಚೌಕದ ಮೇಲೆ ಕ್ಲಿಕ್ ಮಾಡಿ Verify ಮೇಲೆ ಕ್ಲಿಕ್ ಮಾಡಿ.
* ಆಧಾರವನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ. FETCH Details ಮೇಲೆ ಕ್ಲಿಕ್ ಮಾಡಿ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಅರ್ಜಿ‌ಸಲ್ಲಿಸಬೇಕಾ..?; ಹೊಸ ರೇಷನ್ ಕಾರ್ಡ್ Apply ಮಾಡೋದು ಹೇಗೆ.. ಏನೆಲ್ಲಾ ಬೇಕು?


ಇಷ್ಟು ಮಾಡಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.

ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವುದು ಕಡ್ಡಾಯ ಯಾಕೆ?;
* ಭೂ ದಾಖಲೆಗಳನ್ನು ಡಿಜಿಟಲೀಕರಿಸಲು ಸಹಾಯ ಮಾಡುತ್ತದೆ. ಇದು ದಾಖಲೆಗಳನ್ನು ಸುರಕ್ಷಿತವಾಗಿ ಇರಿಸಲು ಮತ್ತು ಭ್ರಷ್ಟಾಚಾರವನ್ನು ತಡೆಯಲು ಸಹಾಯ ಮಾಡುತ್ತದೆ.
* ಭೂಮಿ ಖಾತೆಗಳಲ್ಲಿನ ಅಕ್ರಮಗಳನ್ನು ಗುರುತಿಸಲು ಮತ್ತು ತಡೆಯಲು ಸಹಾಯ ಮಾಡುತ್ತದೆ. ಒಬ್ಬ ವ್ಯಕ್ತಿಗೆ ಎಷ್ಟು ಭೂಮಿ ಹೊಂದಿದೆ ಎಂಬುದರ ಕುರಿತು ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ.
* ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸುಲಭವಾಗಿಸುತ್ತದೆ. ಯೋಗ್ಯ ಫಲಾನುಭವಿಗಳಿಗೆ ಸಬ್ಸಿಡಿಗಳು ಮತ್ತು ಇತರ ಪ್ರಯೋಜನಗಳನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ತಲುಪಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ: ಬರ ಪರಿಹಾರ ಹಣ; NDRF ನಿಂದ ಬಂದ ಹಣ ಶೀಘ್ರ ರೈತರ ಖಾತೆಗೆ ಜಮೆ


ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವುದರಿಂದಾಗುವ ಪ್ರಯೋಜನಗಳು ಏನು?;
* ಲಿಂಕ್ ಮಾಡಿದ ನಂತರ, ರೈತರು ಆನ್ ಲೈನ್ ನಲ್ಲಿ ತಮ್ಮ ಭೂ ದಾಖಲೆಗಳನ್ನು ಸುಲಭವಾಗಿ ಪಡೆಯಬಹುದು.
* ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಭೂ ದಾಖಲೆಗಳನ್ನು ಲಗತ್ತಿಸುವ ಅಗತ್ಯವಿಲ್ಲ.
* ಆಧಾರ್ ಲಿಂಕ್ ಮಾಡುವುದರಿಂದ ಒಬ್ಬ ವ್ಯಕ್ತಿಯ ಭೂ ಒಡೆತನದ ಬಗ್ಗೆ ಸ್ಪಷ್ಟತೆ ಲಭ್ಯವಾಗುತ್ತದೆ. ಇದು ಭವಿಷ್ಯದಲ್ಲಿ ಭೂಮಿ ಖಾತೆಗಳಲ್ಲಿನ ವಿವಾದಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ.
* ಭೂಮಿಯನ್ನು ಆಧಾರ್ ಲಿಂಕ್ ಮಾಡುವ ಮೂಲಕ ಸಾಲ ಪಡೆಯುವುದನ್ನು ಈ ಕ್ರಮವು ಸುಲಭಗೊಳಿಸುತ್ತದೆ. ಬ್ಯಾಂಕುಗಳು ಭೂ ಒಡೆತನದ ರುಜುವಾತನ್ನು ಸುಲಭವಾಗಿ ಪರಿಶೀಲಿಸಬಹುದು.
* ಭೂಮಿ ಮಾರಾಟ ಮಾಡುವಾಗ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಖರೀದಿದಾರರು ಭೂಮಿಯು ಕಾನೂನುಬದ್ಧವಾಗಿ ಮಾರಾಟಗಾರರಿಗೆ ಸೇರಿದೆ ಎಂದು ಖಚಿತಪಡಿಸಿಕೊಳ್ಳಬಹುದು.

RTC Aadhaar Link: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ
RTC Aadhaar Link: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ