Sand: ರಾಜ್ಯಾದ್ಯಂತ ಮರಳು ಮಾರಾಟಕ್ಕೆ ಏಕರೂಪ ದರ ನಿಗದಿ

(Sand) ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ಪೂರೈಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಗ್ರಾಮ ಪಂಚಾಯಿತಿಗಳಿಂದಲೇ ಮರಳು ಹರಾಜು ಪ್ರಕ್ರಿಯೆ:
ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿಪಡಿಸಲಾಗಿದೆ ಎಂದು ವಿವರಿಸಿದ್ದಾರೆ.ಮರಳು ಬ್ಲಾಕ್‌ಗಳ ಹಂಚಿಕೆಯ ಹೊಣೆಯನ್ನು ಜಿಲ್ಲಾ ಸಮಿತಿಗಳಿಗೆ ನೀಡಲಾಗಿದ್ದು ಗ್ರಾಮ ಪಂಚಾಯಿತಿಗಳಿಂದಲೇ ಮರಳು ಹರಾಜು ಪ್ರಕ್ರಿಯೆ ನಡೆಯಲಿದೆ. ಸಾರ್ವಜನಿಕರಿಗೆ ಪೂರೈಸಲು ರಾಜ್ಯಾದ್ಯಂತ ಪ್ರತಿ ಟನ್ ಮರಳಿಗೆ ಸರ್ಕಾರ ಏಕರೂಪ ಬೆಲೆ ₹ 850 ನಿಗದಿಪಡಿಸಿದೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


(Sand) ಕೈಗೆಟುಕುವ ದರದಲ್ಲಿ ಮರಳು:
ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ. ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು.


ಇದನ್ನೂ ಓದಿ; ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!


4, 5 ಶ್ರೇಣಿಗಳ ಹಳ್ಳ, ನದಿ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ನೂತನ ನೀತಿಯಂತೆ ಮರಳು ಬ್ಲಾಕ್ ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಿದ ಮರಳು ಬ್ಲಾಕ್ ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ.


ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅಕ್ರಮ ಮರಳು ದಂಧೆ, ಕಾಳ ಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮರಳು ಮಾರಾಟವನ್ನು ತಡೆಯುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.

Sand: ರಾಜ್ಯಾದ್ಯಂತ ಮರಳು ಮಾರಾಟಕ್ಕೆ ಏಕರೂಪ ದರ ನಿಗದಿ
Sand: ರಾಜ್ಯಾದ್ಯಂತ ಮರಳು ಮಾರಾಟಕ್ಕೆ ಏಕರೂಪ ದರ ನಿಗದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು