Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

ಚಿಕ್ಕಮಗಳೂರು: ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕುಖ್ಯಾತ ಶ್ರೀಗಂಧ ಮರ ಕಳ್ಳರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಕರಿಯಪ್ಪ ಅಲಿಯಾಸ್ ಕರಿಚಿತರೆ, ಪರಮೇಶ್ ಅಲಿಯಾಸ್ ಮುಕುಡಿ, ಶಿವರಾಜ್, ಬಾಲಕೃಷ್ಣ ಬಂಧಿತ ಆರೋಪಿಗಳು.

ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಇದನ್ನೂ ಓದಿ; ಕೇಂದ್ರದ ಯೋಜನೆ ಜೊತೆಗೆ ಹೆಜ್ಜೆ ಹಾಕಿ; ಶೋಭಾ ಕರಂದ್ಲಾಜೆ

ಕಡೂರು ತಾಲೂಕಿನ ಎಮ್ಮೆದೊಡ್ಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಬಂಧಿತರಿಂದ 21 ಕೆ.ಜಿ ಶ್ರೀಗಂಧ, ಕೊಡಲಿ ಬೈಕ್ ಹಾಗೂ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಕಾರ್ಯಾಚರಣೆಯ ನೇತೃತ್ವವನ್ನು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ, ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ವಹಿಸಿದ್ದರು.

ಮಹಿಳೆಯರಿಗೆ ಉಚಿತ ಪ್ರಯಾಣ; ಶಕ್ತಿ ಯೋಜನೆಯ ಬಗ್ಗೆ ಅಧಿಕಾರಿಗಳು ಹೇಳೋದೇನು?

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ವೇಳೆ ಘೋಷಿಸಿದಂತೆ ಗ್ಯಾರಂಟಿ ಯೋಜನೆಗಳನ್ನು ಒಂದೋದಾಗಿ ಜಾರಿಗೆ ತರುತ್ತಿದೆ. ಐದು ಗ್ಯಾರಂಟಿಗಳ ಪೈಕಿ ಜನರನ್ನು ಮೊದಲು ತಲುಪುತ್ತಿರುವುದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ.

ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರು ಮಹಿಳೆಯರಿಗೆ ಉಚಿತ ಟಿಕೆಟ್ ನೀಡಿ, ಶಕ್ತಿ ಯೋಜನೆಗೆ ಚಾಲನೆ ನೀಡಿದರು.

ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣಕ್ಕೆ ಅಗತ್ಯ ದಾಖಲೆ ಏನಾದರೂ ಇರಬೇಕಾ? ಎಲ್ಲ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದಾ? ದೂರದ ಮಿತಿ ಏನಾದರೂ ಇದೆಯಾ? ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಉತ್ತರ

ಯಾರಿಗೆ ಉಚಿತ ಬಸ್ ಪ್ರಯಾಣ?:
ಕರ್ನಾಟಕ ರಾಜ್ಯದ ಮಹಿಳಾ ಪ್ರಯಾಣಿಕರು ಸೇರಿ 6 ರಿಂದ 12 ವರ್ಷದೊಳಗಿನ ಬಾಲಕಿಯರು, ಲೈಂಗಿಕ ಅಲ್ಪಸಂಖ್ಯಾತರು ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಎಲ್ಲ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದಾ?:
ಎಲ್ಲಾ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸುವಂತಿಲ್ಲ. ಕೇವಲ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿಯ ಬಸ್‌ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಇದೆ. ಖಾಸಗಿ ಬಸ್‌ಗಳಲ್ಲಿ, ಹೊರ ರಾಜ್ಯದ ಬಸ್‌ಗಳಲ್ಲಿ ದುಡ್ಡು ಪಾವತಿಸಿಯೇ ಮಹಿಳೆಯರು ಪ್ರಯಾಣಿಸಬೇಕು.

ಹಾಗಾದರೆ ಎಸಿ ಮತ್ತು ಸ್ಲೀಪರ್ ಬಸ್‌ಗಳಲ್ಲಿ ಫ್ರೀ ಹೋಗಬಹುದಾ?:
ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್‌ಗಳನ್ನು ಹೊರತುಪಡಿಸಿ ಉಳಿದ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಇದನ್ನೂ ಓದಿ; ಮೂಡಿಗೆರೆಯ ದೇವರುಮನೆಯಲ್ಲಿ ಸಿಕ್ಕ ಶವದ ಹಿಂದಿನ ಸ್ಟೋರಿ ಏನು? ಕೊಲೆಯಾಗಿದ್ದಾನೆ ಎನ್ನಲಾದ ಆತ ಯಾರು?

ಅಂತರ್ ರಾಜ್ಯ ಬಸ್‌ಗಳಲ್ಲಿಯೂ ಉಚಿತ ಪ್ರಯಾಣ ಮಾಡಬಹುದಾ?:
ಉಚಿತ ಪ್ರಯಾಣವು ರಾಜ್ಯದ ಒಳಗೆ ಮಾತ್ರ ಸಿಮೀತವಾಗಿರುತ್ತದೆ ಹೊರತು, ಕೆಲವು ಆಯ್ದ ಅಂತರ್ ರಾಜ್ಯ ಬಸ್‌ಗಳಲ್ಲಿಯೂ ಉಚಿತ ಬಸ್ ಪ್ರಯಾಣ ಇರುವುದಿಲ್ಲ.

ಉಚಿತ ಬಸ್ ಪ್ರಯಾಣಕ್ಕೆ ದೂರದ ಮಿತಿ ಏನಾದರೂ ಇದೆಯಾ?:
ಮಹಿಳಾ ಪ್ರಯಾಣಿಕರಿಗೆ ದೂರದ ಮಿತಿ ಯಾವುದೇ ಇರುವುದಿಲ್ಲ ಆದರೆ, ಈ ಪ್ರಯಾಣದ ಸೌಲಭ್ಯವು ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯವಾಗುತ್ತದೆ.

ಪ್ರಯಾಣಿಸುವಾಗ ಅಗತ್ಯ ದಾಖಲೆ ಇರಬೇಕಾ?:
ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ, ವಾಸಸ್ಥಳ ನಮೂದಿಸಿರುವ ಗುರುತಿನ ಚೀಟಿ, ಅಂಗವಿಕಲ, ಹಿರಿಯ ನಾಗರೀಕರ ಕಲ್ಯಾಣ ಇಲಾಖೆ ನೀಡಿರುವ ಗುರುತಿನ ಪತ್ರ ಅಥವಾ ಇವುಗಳಲ್ಲಿ ಯಾವುದಾದರೊಂದು ಗುರುತಿನ ಪತ್ರ ಭೌತಿಕವಾಗಿ ಅಥವಾ ಡಿಜಿಲಾಕರ್‌ನಲ್ಲಿ ಇರಬೇಕು. ಈ ಗುರುತಿನ ಚೀಟಿಗಳಲ್ಲಿ ಫೋಟೋ ಮತ್ತು ವಾಸಸ್ಥಳ ನಮೂದಾಗಿರಬೇಕು.

ಯೋಜನೆ ಲಾಭ ಪಡೆಯಲು ಅರ್ಜಿ ಸಲ್ಲಿಸಬೇಕಾ?:
ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಉಚಿತ ಬಸ್ ಪ್ರಯಾಣಕ್ಕೆ ನೋಂದಾಯಿಸಿಕೊಳ್ಳಬೇಕು. ಅದಾದ ಬಳಿಕ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ಸರ್ಕಾರ ವಿತರಿಸಲಿದೆ.(ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು “ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸುವುದು.)

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಅರ್ಜಿ ಸಲ್ಲಿಕೆಗೆ ಅಥವಾ ಸ್ಮಾರ್ಟ್ ಕಾರ್ಡ್ ಪಡೆಯಲು ಹಣ ನೀಡಬೇಕಾ?:
ಅರ್ಜಿ ಸಲ್ಲಿಕೆಗೆ ಯಾವುದೇ ಹಣವನ್ನು ಮಹಿಳೆಯರು ನೀಡಬೇಕಿಲ್ಲ. ನೀವೇ ಸೇವಾಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಇನ್ನು, ಸ್ಮಾರ್ಟ್ ಕಾರ್ಡ್ ಪಡೆಯಲು ಸದ್ಯದ ಮಾಹಿತಿ ಪ್ರಕಾರ ಸರ್ಕಾರ ಯಾವುದೇ ಶುಲ್ಕವನ್ನು ವಿಧಿಸಿಲ್ಲ.

ಸ್ಮಾರ್ಟ್ ಕಾರ್ಡ್ ಬರೋವರೆಗೂ ಉಚಿತ ಪ್ರಯಾಣ ಇಲ್ವಾ?:
ಸ್ಮಾರ್ಟ್ ಕಾರ್ಡ್ ವಿತರಣೆ ತಡವಾಗುತ್ತದೆ. ಈ ಹಿನ್ನೆಲೆ ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡಲು ಸೂಚಿಸಲಾಗಿದೆ. ಆದ್ದರಿಂದ ಸ್ಮಾರ್ಟ್ ಕಾರ್ಡ್ ಮಹಿಳೆಯರ ಕೈ ಸೇರೋವರೆಗೂ ಕೂಡ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಬಹುದು.

ಲಗೇಜ್‌ಗೆ ಏನಾದರೂ ಶುಲ್ಕ ಇದೆಯಾ?;
ಸಾಮಾನ್ಯವಾಗಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಎಲ್ಲರಿಗೂ ಉಚಿತ ಲಗೇಜ್ ಮಿತಿ ಇದೆ. ಅದನ್ನು ಹೊರತುಪಡಿಸಿ ಹೆಚ್ಚು ಲಗೇಜ್ ಇದ್ದರೆ ಅದರ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಇನ್ನು ಈ ಬಗ್ಗೆ ಸ್ವತಃ ವ್ಯವಸ್ಥಾಪಕರಾದ ಬೇಬಿ ಬಾಯಿ ಅವರೇ ಶಕ್ತಿ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

Most Popular

Recent Comments