(Sarathi Scheme:) ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಪ್ರಯಾಣಿಕ ಆಟೋ ರಿಕ್ಷಾ / ಸರಕು ವಾಹನ / ಟ್ಯಾಕ್ಸಿ ಖರೀದಿಗಾಗಿ ಬ್ಯಾಂಕುಗಳಿಂದ ಸಾಲಗಳಿಗೆ ವಾಹನದ ಮೌಲ್ಯದ 50% ಅಥವಾ ಗರಿಷ್ಠ ರೂ. 3.00 ಲಕ್ಷ ಸಬ್ಸಿಡಿ ನೀಡಲಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಆದಿತ್ಯ ಯೋಗದಿಂದ ನಾಳೆಯಿಂದ ಈ 5 ರಾಶಿಗೆ ಎಲ್ಲವೂ ಶುಭ
ಸ್ವಾವಲಂಬಿ ಸಾರಥಿ ಯೋಜನೆಯನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC)ವು ರಾಷ್ಟ್ರೀಕೃತ / ಪರಿಶಿಷ್ಟ ಬ್ಯಾಂಕುಗಳ ಸಹಯೋಗದೊಂದಿಗೆ ಜಾರಿಗೊಳಿಸುತ್ತದೆ.
(Sarathi Scheme:) ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಹಿಂದುಳಿದ ವರ್ಗಗಳ ಪ್ರವರ್ಗ 3ಬಿ ಸಮುದಾಯಗಳಿಗೆ ಸೇರಿದವರಾಗಿರಬೇಕು.
* ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು
* ಗ್ರಾಮೀಣ ಪ್ರದೇಶದವರಿಗೆ ರೂ.98000/-ಗಳು ನಗರ ಪ್ರದೇಶದವರಿಗೆ ರೂ. 120000/-ಗಳನ್ನು ಮೀರಿರಬಾರದು.
* ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
* ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು.
* ಈ ಹಿಂದೆ ನಿಗಮದ ಯೋಜನೆಗಳಲ್ಲಿ ಅಥವಾ ಸರ್ಕಾರಿ ಇಲಾಖೆಗಳಲ್ಲಿ ಈ ಉದ್ದೇಶಕ್ಕೆ ಯಾವುದೇ ಯೋಜನೆಗಳಿಂದ ಸೌಲಭ್ಯ ಪಡೆದಿರಬಾರದು.
* ರಾಷ್ಟ್ರೀಕೃತ ಬ್ಯಾಂಕ್ ಶಾಖೆಯಲ್ಲಿ ಸರ್ಕಾರದ ಸೌಲಭ್ಯ ಪಡೆಯುವ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆ ಹೊಂದಿರಬೇಕು.
* ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯತಕ್ಕದ್ದು.
* ಮಹಿಳೆಯರಿಗೆ ಆದ್ಯತೆ ನೀಡುವುದು.
* ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು.
ಇದನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
ಸಬ್ಸಿಡಿ ವಿವರ:
ಪರಿಶಿಷ್ಟ ಜಾತಿ/ ಪಂಗಡ: ರೂ. 4,00,000/- ಅಥವಾ ವಾಹನದ ಬೆಲೆಯ 75% ರಷ್ಟು
ಅಲ್ಪಸಂಖ್ಯಾತರು: ರೂ. 3,00,000/- ವರೆಗೆ ಅಥವಾ ವಾಹನದ ಬೆಲೆಯ ಶೇಕಡ 50% ರಷ್ಟು
ಒಬಿಸಿ: ರೂ. 3,00,000/- ವರೆಗೆ ಅಥವಾ ವಾಹನದ ಬೆಲೆಯ ಶೇಕಡ 50% ರಷ್ಟು
ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ?:(Sarathi Scheme:)
https://kmdconline.karnataka.gov.in/Portal/login ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಇದನ್ನೂ ಓದಿ: ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್; ಏನದು? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದೆಲ್ಲಾ ಬೇಕು?:
* ಆಧಾರ ಕಾರ್ಡ್
* ಗುರುತಿನ ಚೀಟಿ
* ಪಡಿತರ ಚೀಟಿ
* ಲಘು ವಾಹನ ಚಾಲನಾ ಪರವಾನಗಿಯ ದೃಢೀಕೃತ ಪ್ರತಿ.
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
* ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು).
* ಇತರೆ ದಾಖಲೆ

ಸೂಚನೆ: ಈ ಯೋಜನೆಗೆ ಇದೀಗ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ. ಅರ್ಜಿ ಸಲ್ಲಿಸಲು ಅವಕಾಶ ನೀಡಿದ ಬಳಿಕ ತಿಳಿಸಲಾಗುತ್ತದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು (Sarathi Scheme:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





