SC-ST ACT: ಅಪರಾಧ ಪ್ರಕರಣದಲ್ಲಿ ಸಂತ್ರಸ್ತರು ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದ್ದಾನೆ ಎಂಬ ಒಂದೇ ಕಾರಣಕ್ಕೆ ಎಲ್ಲಾ ಅಪರಾಧ ಕೃತ್ಯಗಳಿಗೂ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದು ಸರಿಯಲ್ಲ, ಅಪರಾಧ ಜಾತಿ ಮೇಲಿನ ದಾಳಿಯಾಗಿದ್ದರೆ ಮಾತ್ರ ಈ ಕಾಯ್ದೆಯನ್ನು ಅನ್ವಯಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ; ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ
ಅಪರಾಧ ಮತ್ತು ಕಾರಣವಾದ ವಿಷಯಗಳ ಆಧಾರದ ಮೇಲೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಪ್ರಕರಣ ದಾಖಲಿಸಬೇಕೇ ವಿನಃ ಸಂತ್ರಸ್ತ ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಎಸ್ಸಿ-ಎಸ್ಟಿ ಕಾಯ್ದೆಯ ಸೆಕ್ಷನ್ 3ರ ಅಡಿ (ದೌರ್ಜನ್ಯಕ್ಕೆ ಶಿಕ್ಷೆ) ಪ್ರಕರಣ ದಾಖಲಿಸಬಾರದು ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ; ಟ್ಯಾಕ್ಸಿಗಳ ಕಳ್ಳಾಟಕ್ಕೆ ಬ್ರೇಕ್; ಸಾರಿಗೆ ಇಲಾಖೆಯಿಂದ ಏಕರೂಪ ದರ ಅಸ್ತ್ರ ಪ್ರಯೋಗ
SC-ST ACT: ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು:
ಅಸ್ಪೃಷ್ಯತೆ ತಡೆಗಟ್ಟಲು, ನಿರ್ಮೂಲನೆ ಮಾಡಲು ಮತ್ತು ಸಮುದಾಯದ ಮೇಲಿನ ದಾಳಿಯನ್ನು ತಡೆಗಟ್ಟಲು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಹೀಗಾಗಿ ಜಾತಿ ಆಧಾರಿತ ದಾಳಿ ಅಥವಾ ದ್ವೇಷದಿಂದ ನಡೆಸಿದ ಅಪರಾಧ ಕೃತ್ಯಕ್ಕೆ ಅಷ್ಟೇ ಎಸ್ಸಿ-ಎಸ್ಟಿ ದೌರ್ಜನ್ಯ ಅಡಿ ಪ್ರಕರಣ ದಾಖಲಿಸಬೇಕು ಮತ್ತು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಬೇಕು. ಆರೋಪವನ್ನು ಕೂಲಂಕಷಾಗಿ ಪರಿಶೀಲಿಸಬೇಕು. ಸುಖಾಸುಮ್ಮನೆ ಆರೋಪ ಹೊರಿಸಬಾರದು. ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಜಾತಿ ಆಧಾರಿತ ದಾಳಿಯಿಂದ ರಕ್ಷಣೆ ಮಾಡಲಿಕ್ಕಷ್ಟೇ ಕಾಯ್ದೆ ಬಳಸಬೇಕು. ಈ ವಿಚಾರದಲ್ಲಿ ತನಿಖಾಧಿಕಾರಿ ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.

ಇದನ್ನೂ ಓದಿ; sc, st ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಪ್ರಕರಣದ ಹಿನ್ನೆಲೆ:
ಬೆಂಗಳೂರಿನ ವ್ಯಕ್ತಿಗಳಿಬ್ಬರ ನಡುವೆ ಯಶವಂತಪುರ ಹೋಬಳಿಯಲ್ಲಿರುವ ಜಮೀನು ಮಾಲಿಕತ್ವಕ್ಕೆ ಸಂಬಂಧಿಸಿದಂತೆ ವ್ಯಾಜ್ಯವಿದ್ದು, ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಈ ವ್ಯಾಜ್ಯದ ಹಿನ್ನೆಲೆಯಲ್ಲಿ ವಾದಿ ಪ್ರತಿವಾದಿ ವಿರುದ್ಧ ಹಲಸೂರು ಗೇಟ್ ಠಾಣೆ ಪೊಲೀಸರಿಗೆ 2020 ರಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಪ್ರತಿವಾದಿ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1) (ಎಫ್) 3(1) (ಜಿ) ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 172, 173 ಅಡಿ ಎಫ್.ಐ.ಆರ್ ದಾಖಲಿಸಿದ್ದರು. ಹಾಗೆಯೆ, ನಗರದ 70ನೇ ಹೆಚ್ಚುವರಿ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರತಿವಾದಿ ತಮ್ಮ ವಿರುದ್ಧ ದಾಖಲಿಸಿರುವ ಎಫ್.ಐ.ಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಪ್ರಕರಣ ಯಾವುದೇ ಇಬ್ಬರು ನೆರೆಹೊರೆ ಜಮೀನು ಮಾಲೀಕರ ನಡುವೆ ಉದ್ಭವಿಸಬಹುದಾಗ ವ್ಯಾಜ್ಯದಂತೆ ಇದೆ. ಪ್ರಕರಣವನ್ನು ಸಿವಿಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಬಹುದಿತ್ತು. ಎಸ್ಸಿ-ಎಸ್ಟಿ ಕಾಯ್ದೆ (SC-ST ACT: ) ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟು ಪ್ರಕರಣವನ್ನು ರದ್ದುಪಡಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply