(SC-ST Students:) ಬೆಂಗಳೂರು: ಆರ್ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಶೇಕಡಾ 25ರ ಮೀಸಲು ಸೀಟುಗಳ ಮೂಲಕ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ಸೌಲಭ್ಯ ಘೋಷಿಸಿದೆ.
ಇನ್ನುಮುಂದೆ ಈ ವಿದ್ಯಾರ್ಥಿಗಳು ಅದೇ ಖಾಸಗಿ ಶಾಲೆಗಳಲ್ಲಿ 10ನೇ ತರಗತಿವರೆಗೆ ಉಚಿತ ಶಿಕ್ಷಣವನ್ನು ಮುಂದುವರಿಸಬಹುದಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಹೊಸ ನಿರ್ಧಾರ ಕೈಗೊಂಡಿದ್ದು, ಸಾವಿರಾರು ಬಡ ಕುಟುಂಬಗಳಿಗೆ ಇದರಿಂದ ದೊಡ್ಡ ನೆರವಾಗಲಿದೆ.
ಈವರೆಗೆ ಜಾರಿಯಲ್ಲಿದ್ದ ನಿಯಮದ ಪ್ರಕಾರ, ಆರ್ಟಿಇ ಅಡಿಯಲ್ಲಿ ಪ್ರವೇಶ ಪಡೆದ ಮಕ್ಕಳಿಗೆ 8ನೇ ತರಗತಿವರೆಗೆ ಮಾತ್ರ ಸರ್ಕಾರ ಶುಲ್ಕ ಮರುಪಾವತಿ ಮಾಡುತ್ತಿತ್ತು. 9 ಮತ್ತು 10ನೇ ತರಗತಿಗಳಿಗೆ ವಿದ್ಯಾರ್ಥಿಗಳು ಮುಂದುವರೆಯಬೇಕಾದರೆ, ಪೋಷಕರು ಶಾಲಾ ಶುಲ್ಕವನ್ನು ಭರಿಸಬೇಕಾಗುತ್ತಿತ್ತು.
ಆದರೆ ಇದೀಗ ಸರ್ಕಾರದ ಹೊಸ ಆದೇಶದಂತೆ, SC ಮತ್ತು ST ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅದೇ ಖಾಸಗಿ ಶಾಲೆಯಲ್ಲಿ 9 ಹಾಗೂ 10ನೇ ತರಗತಿಗೂ ಶಿಕ್ಷಣ ಮುಂದುವರಿಸಲು ಬಯಸಿದರೆ, ಆ ತರಗತಿಗಳ ಶುಲ್ಕವನ್ನೂ ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ.
ಈ ಕ್ರಮದಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಭದ್ರತೆ ದೊರೆಯಲಿದ್ದು, ಮಧ್ಯದಲ್ಲೇ ಶಾಲೆ ಬಿಟ್ಟುಕೊಡುವ ಪರಿಸ್ಥಿತಿ ತಪ್ಪಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (SC-ST Students:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply