(Scheduled Caste Reservation:) ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಕ್ರಮವಹಿಸಲು ಸರ್ಕಾರದಿಂದ ನಡೆಸಲಾಗುತ್ತಿರುವ ಸಮೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಗಣತಿದಾರರನ್ನು ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ಆದೇಶದಲ್ಲಿ ಏನಿದೆ?:
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ಗಣತಿದಾರರನ್ನಾಗಿ ಗುರುತಿಸಲು ಹಾಗೂ ಅದರೊಂದಿಗೆ .10 ರಷ್ಟು ಶಿಕ್ಷಕರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲು ಹಾಗೂ 10 ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಗುರುತಿಸಲು ಆದೇಶಿಸಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಬೆಂಗಳೂರು ಮತ್ತು ಮೈಸೂರು ವಿಭಾಗಗಳಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನೋಡಲ್ ಅಧಿಕಾರಿಯಾಗಿದ್ದು, ಈ ಕುರಿತು ಸಂಪೂರ್ಣ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಮಾಡತಕ್ಕದ್ದು ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರೊಂದಿಗೆ ಸಮನ್ವಯ ಸಾಧಿಸಿ ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ನಿಯಮಾನುಸಾರ ಪೂರ್ಣಗೊಳಿಸತಕ್ಕದ್ದು.
ಈ ಕುರಿತು ಅಗತ್ಯ ಕ್ರಮಗಳನ್ನು ಅತ್ಯಂತ ಜರೂರಾಗಿ ಕೈಗೊಂಡು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Scheduled Caste Reservation:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





