ಬೆಂಗಳೂರು : ಆ.12- ಆಗಸ್ಟ್ 23 ರಿಂದ 9ರಿಂದ 12ನೇ ತರಗತಿವರೆಗೆ ಶಾಲಾಕಾಲೇಜನ್ನು ಪ್ರಾರಂಭಿಸುವ ಸಂಬoಧದ ಬಗ್ಗೆ ನಾಳೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ- ಕಾಲೇಜುಗಳ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಲಸಿಕೆಯನ್ನು ಪಡೆದಿರಬೇಕು. ಮಾಸ್ಕ್ ಬಳಕೆ, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಾಪಾಡುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.
ಈ ಸಂಬoಧ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು.
ಆ.30ರಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಕೋವಿಡ್ ಸೋಂಕು ನಿಯಂತ್ರಣದಲ್ಲಿದ್ದರೆ 1ರಿಂದ 8ನೇ ತರಗತಿವರೆಗೂ 2ನೇ ಹಂತದಲ್ಲಿ ಶಾಲೆಯನ್ನು ಪ್ರಾರಂಭ ಮಾಡುವ ಬಗ್ಗೆಯೂ ಗಂಭೀರ ಚಿಂತನೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.