ಬೆಂಗಳೂರು: ರಾಜ್ಯಾದ್ಯಂತ ಇಂದಿನಿoದ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳು ಪುನಾರಂಭಗೊoಡಿವೆ.
ತಜ್ಞರ ಸಲಹೆಯನ್ನು ಹಾಗೂ ಮಾರ್ಗಸೂಚಿಯನ್ನು ಪಡೆದಂತಹ ರಾಜ್ಯ ಸರ್ಕಾರ 6ನೇ ತರಗತಿಯಿಂದ ಶಾಲೆಗಳನ್ನು ಆರಂಭ ಮಾಡಿದ್ದು ಶೇಕಡಾ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಯಲ್ಲಿ ವಿಭಾಗಗಳನ್ನಾಗಿ ಮಾಡಿ ಸೂಕ್ತವಾಗಿರುವಂತಹ ಕೊರೋನಾ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸರ್ಕಾರ ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸಿದೆ.
ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಮಾಸ್ಕ್ನನ್ನು ಧರಿಸಿ, ಸ್ಯಾನಿಟೈಸರ್‌ನನ್ನು ಹಾಕಿಕೊಂಡು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶಾಲೆಗೆ ಬರುವಂತೆ ಸೂಚಿಸಲಾಗಿದೆ ಕೊರೋನಾ ಮೂರನೇ ಅಲೆಯ ಭೀತಿಯಿರುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಲೆಯ ಆವರಣದಲ್ಲಿ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರವು ಆದೇಶವನ್ನು ಹೊರಡಿಸಿದೆ.
ಒಂದೂವರೆ ವರ್ಷದ ನಂತರ 6ನೇ ತರಗತಿಯ ನಂತರದ ಮಕ್ಕಳು ಇಂದು ಶಾಲೆಯ ಕಡೆ ಮುಖ ಮಾಡುತ್ತಿದ್ದಾರೆ. ವಾರದಲ್ಲಿ ಐದು ದಿನ ಮಾತ್ರ ಸದ್ಯಕ್ಕೆ ಶಾಲೆಯನ್ನು ನಡೆಸಲಾಗುತ್ತಿದ್ದು ದಿನ ಬಿಟ್ಟು ದಿನ ವಿದ್ಯಾರ್ಥಿಗಳು ಶಾಲೆಗೆ ಬರಲಿದ್ದಾರೆ. ಶನಿವಾರ, ಭಾನುವಾರ ಶಾಲೆಯನ್ನು ಸ್ವಚ್ಛ ಮಾಡುವಂತೆ ಸೂಚಿಸಲಾಗಿದೆ.
ರಾಜ್ಯಾದ್ಯಂತ 6ರಿಂದ 8ನೇ ತರಗತಿಯವರೆಗೆ ಶಾಲೆಯು ಪುನರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳನ್ನು ಪೋಷಕರು ಆತಂಕ ಪಡದೇ ಶಾಲೆಗೆ ಕಳುಹಿಸಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿರುವಂತಹ ಬಿ ಸಿ ನಾಗೇಶ್‌ರವರು ಪೋಷಕ ವೃಂದದವರಿಗೆ ತಿಳಿಸಿದ್ದಾರೆ.