Wednesday, November 29, 2023
Homeರಾಜ್ಯಇಂದಿನಿಂದ 9 ರಿಂದ 12 ನೇ ಭೌತಿಕ ತರಗತಿಗಳು ಆರಂಭ - ಸರ್ಕಾರದ ಈ ನಿರ್ಧಾರಕ್ಕೆ...

ಇಂದಿನಿಂದ 9 ರಿಂದ 12 ನೇ ಭೌತಿಕ ತರಗತಿಗಳು ಆರಂಭ – ಸರ್ಕಾರದ ಈ ನಿರ್ಧಾರಕ್ಕೆ ಬೇಸರ ವ್ಯಕ್ತ ಪಡಿಸಿದ ಪೋಷಕರು

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಹಾಗೂ ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ26 ಜಿಲ್ಲೆಗಳಲ್ಲಿ ಇಂದಿನಿoದ 9-12 ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕೆ ತರಗತಿಗಳು ಆರಂಭವಾಗಿದ್ದು, ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ತರಗತಿಗಳನ್ನು ಆರಂಭ ಮಾಡಲಾಗಿದೆ.

ಆದರೆ, ಕೋವಿಡ್ ಸೋಂಕು ತಗಲುವ ಭೀತಿ ಹಿನ್ನೆಲೆಯಲ್ಲಿ ಶಾಲೆಯನ್ನು ಆರಂಭಿಸುವ ಸರ್ಕಾರದ ನಿರ್ಧಾರಕ್ಕೆ ಶೇ.75 ರಷ್ಟು ಪೋಷಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆಂದು ಕರ್ನಾಟಕದ ಸ್ವತಂತ್ರ ಸಿಬಿಎಸ್‌ಇ ಶಾಲೆಗಳ ಮ್ಯಾನೇಜ್ಮೆಂಟ್ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶವು ತಿಳಿದುಬಂದಿದೆ.

ಸಮೀಕ್ಷೆಯಲ್ಲಿ 9 ರಿಂದ12ನೇ ತರಗತಿಯವರೆಗಿನ ವಿದ್ಯಾರ್ಥಿಗಳ ಶೇ.75 ರಷ್ಟು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆಂದು ತಿಳಿದುಬಂದಿದೆ.ಇದಕ್ಕೆ ಮುಖ್ಯ ಕಾರಣ ಕೋವಿಡ್ ಸೋಂಕು ತಗುಲುವ ಆತಂಕ ಕಾರಣವೆಂದು ಹೇಳಲಾಗುತ್ತಿದೆ. ಸಮೀಕ್ಷೆಯಲ್ಲಿ ಉಳಿದ ಶೇ.25 ರಷ್ಟು ಪೋಷಕರು ಭೌತಿಕ ತರಗತಿಗಳ ಪರವಾಗಿದ್ದಾರೆ.

ಆಫ್‌ಲೈನ್ ತರಗತಿಗಳು ವಿದ್ಯಾರ್ಥಿಗಳ ಸಾಮಾಜಿಕ ಸಂವಹನವನ್ನು ಸುಧಾರಿಸುವುದರ ಜೊತೆಗೆ, ಆನ್‌ಲೈನ್‌ಗಿಂತ ಉತ್ತಮ ಕಲಿಕೆಯನ್ನು ಅಳವಡಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ರಾಜ್ಯದ 26 ಜಿಲ್ಲೆಗಳಲ್ಲಿ ಸುಮಾರು 16 ಸಾವಿರ ಪ್ರೌಢಶಾಲೆ, 5000 ಕ್ಕೂ ಹೆಚ್ಚು ಪಿಯು ಕಾಲೇಜುಗಳ 9ರಿಂದ 12 ನೇ ತರಗತಿಗೆ ಈಗಾಗಲೇ ದಾಖಲಾತಿ ಪಡೆದಿರುವ ಸುಮಾರು 25 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ನಾಲ್ಕೂವರೆ ತಿಂಗಳ ಬಳಿಕ ಪುನಾರಂಭವಾಗಲಿವೆ. ಕೋವಿಡ್ ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿಯನ್ನು ಆರಂಭ ಮಾಡಲು ಮುಂದಿನ ದಿನಗಳಲ್ಲಿ ಸರ್ಕಾರವು ನಿರ್ಧಾರವನ್ನು ಕೈಗೊಳ್ಳಲಿದೆ.

ಈ ನಡುವೆ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಭಾನುವಾರ ಶೇ.2ಕ್ಕಿಂತ ಕೆಳಕ್ಕೆ ಕುಸಿದಿದೆಯಾದರೂ, ಅಲ್ಲಿ ಶಾಲೆಗಳನ್ನು ಆರಂಭಿಸಲು ಅನುಮತಿಯನ್ನು ನೀಡಿಲ್ಲ. ಸರ್ಕಾರದ ಆದೇಶದಂತೆ ಎಲ್ಲಾ ಶಾಲೆಗಳು ಮತ್ತು ಪಿಯು ಕಾಲೇಜುಗಳ ಭೌತಿಕ ತರಗತಿಯ ಆರಂಭಕ್ಕೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಅನುಸರಿಸಿ ಅಗತ್ಯವಾಗಿರುವಂತಹ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

Most Popular

Recent Comments