Saturday, June 10, 2023
Homeರಾಜ್ಯಶಾಲೆಗಳ ಪುನಾರಂಭಕ್ಕೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ;

ಶಾಲೆಗಳ ಪುನಾರಂಭಕ್ಕೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ;

ಬೆಂಗಳೂರು: ರಾಜ್ಯಾದ್ಯಂತ ಆಗಸ್ಟ್ 23 ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಆಗಸ್ಟ್23 ರಿಂದ 9 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರ ನೀಡಿರುವ ಗೈಡ್ ಲೈನ್ ಪ್ರಮುಖಾಂಶಗಳು ಈ ಕೆಳಗಿನಂತಿದೆ:

ಸೋಮವಾರದಿoದ ಶುಕ್ರವಾರದವರೆಗೆ ಬೆಳಿಗ್ಗೆ 1೦-1:3೦ ಗಂಟೆಯವರೆಗೆ ತರಗತಿಗಳು ನಡೆಯಲಿವೆ

ಶನಿವಾರ ಬೆಳಿಗ್ಗೆ 1೦ರಿಂದ 12:30ವರೆಗೆ ತರಗತಿಗಳು ನಡೆಯುತ್ತವೆ

ಶಾಲೆಗೆ ಬರಲು ಪೋಷಕರು ನೀಡುವ ಅನುಮತಿ ಪತ್ರ ಕಡ್ಡಾಯವಾಗಿ ಇರಬೇಕು

ಮಕ್ಕಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ತರಬೇಕು

ವಿದ್ಯಾರ್ಥಿಗಳು ಮನೆಯಿಂದಲೇ ಊಟ/ಉಪಹಾರ ತರಬೇಕು

ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾಗಬಹುದು

ಶಾಲೆಗಳಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು

ಶಿಕ್ಷಕರು 15-2೦ ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿಯನ್ನು ನಡೆಸಬೇಕು

Most Popular

Recent Comments