(Self Employment:) ಶಿವಮೊಗ್ಗ; ಮೇ.20: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕರಿಗಾಗಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಸಂಸ್ಥೆಯಲ್ಲಿ ಜೂನ್ 1ರಿಂದ 31 ದಿನಗಳ ಕಾಲ ತರಬೇತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಶಿಬಿರದಲ್ಲಿ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿಯೊಂದಿಗೆ ಗಿಂಬಲ್ ಮತ್ತು ಡ್ರೋಣ್ ಬಳಕೆ, ಮಾಡೆಲ್ ಫೋಟೋಶೂಟ್, ಪ್ರಾಡೆಕ್ಟ್ ಫೋಟೋಗ್ರಫಿ, ಔಟ್‌ಡೋರ್ ಫೋಟೋಶೂಟ್, ಸ್ಟುಡಿಯೋ ಸೆಟ್‌ಅಪ್, ಫ್ರೀ ವೆಡ್ಡಿಂಗ್ ಶೂಟ್, ವೆಡ್ಡಿಂಗ್ ಶೂಟ್, ಫೋಟೋ ಮತ್ತು ವಿಡಿಯೋ ಎಡಿಟಿಂಗ್, ಫೋಟೋಶಾಪ್ ಹಾಗೂ ಕರಿಷ್ಮಾ ಆಲ್ಬಂ ತಯಾರಿಕೆ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
18 ರಿಂದ 50 ವರ್ಷ ವಯಸ್ಸಿನ ಕರ್ನಾಟಕದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಮತ್ತು ಪುರುಷರು ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಈ ತರಬೇತಿ ಉಪಯುಕ್ತವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.
ಶಿಬಿರಾರ್ಥಿಗಳಿಗೆ ಉಚಿತ ತರಬೇತಿ, ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ಸ್ಥಳೀಯ ಭಾಷೆ ಬಲ್ಲವರಾಗಿರಬೇಕು.
ತರಬೇತಿ ಪೂರ್ಣಗೊಂಡ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಮೇ 25ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆನಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ಹಾಜರಾಗಬಹುದು.
ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳು ಮೇ 25, 2026ರೊಳಗೆ 8970476050, 9591514154, 6363139123, 9686248369 ಅಥವಾ 9505894247 ಸಂಖ್ಯೆಗಳ ಮೂಲಕ ಸಂಸ್ಥೆಯನ್ನು ಸಂಪರ್ಕಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Self Employment:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply