Sunday, September 24, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ, ಕಾಂಗ್ರೆಸ್ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ

ಚಿಕ್ಕಮಗಳೂರು: ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ, ಕಾಂಗ್ರೆಸ್ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಗ್ಯಾರಂಟಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿತ್ತು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಇತ್ತೀಚೆಗೆ ಶೋಭಾ ಕರಂದ್ಲಾಜೆಗೂ ನಿಮಗೂ ಪ್ರಯಾಣ ಫ್ರೀ! ಎಂದು ಟ್ವೀಟ್ ನಲ್ಲಿ ಕಾಲೆಳೆದಿದೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಇದಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ ಒಳ್ಳೆದಾಗಲಿ, ಮಹಿಳೆಯರು ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು ಆದರೆ, ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತೆ ಇದಕ್ಕೆ ಜನರೇ ಉತ್ತರ ಕೊಡ್ತಾರೆ ನಾನೇನೂ ಹೇಳಲ್ಲ ಎಂದು ಹೇಳಿಕೆ ನೀಡಿದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇನ್ನು ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ, ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು ಎಂದರು.

ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ‍್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದ್ದು ಎಂದು ನಗರದಲ್ಲಿ ಹೇಳಿಕೆ ನೀಡಿದರು.

ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Most Popular

Recent Comments