ಕೊಡಗು: (ನ್ಯೂಸ್ ಮಲ್ನಾಡ್ ವರದಿ) ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕಾರಿನ ಮೇಲೆ ಗುಂಡಿನ ದಾಳಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ; ನನಗೆ ಟಿಕೆಟ್ ತಪ್ಪಿಸಿದ್ದು ಶಾಸಕ ಸಿ. ಟಿ ರವಿ: ಎಂ ಪಿ ಕುಮಾರಸ್ವಾಮಿ ಕಿಡಿ
ವಿಶ್ವ ಹಿಂದೂ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಅವರು ತಮ್ಮ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಇಲ್ಲಿನ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಬುಧವಾರ ತಡರಾತ್ರಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗಮಧ್ಯದಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಸ್ವಲ್ಪದರಲ್ಲೇ ಪಾರಾಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ; ಟ್ರ‍್ಯಾಕ್ಟರ್‌ನ ಹಿಂಬದಿ ಡಾಬರ್ ರಾಡ್‌ಗೆ ತಲೆ ತಾಗಿ ಒಂದೂವರೆ ವರ್ಷದ ಮಗು ಸಾವು
ಕೆಲಸದ ಮೇಲೆ ಚಟ್ನಳ್ಳಿ ಗ್ರಾಮಕ್ಕೆ ತೆರಳಿದ್ದ ಕೃಷ್ಣಮೂರ್ತಿ, ಕೆಲಸ ಮುಗಿಸಿ ಮತ್ತೆ ಮಡಿಕೇರಿಗೆ ಕಾರಿನಲ್ಲಿ ವಾಪಸಾಗುತ್ತಿದ್ದರು ಈ ವೇಳೆ ಅಭ್ಯಾಲ ಎಂಬ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.
ಇದನ್ನೂ ಓದಿ; ಬಿಜೆಪಿ ಸರ್ಕಾರಕ್ಕೆ ಜನರ ಹಿತ ಮುಖ್ಯವಲ್ಲ: ಶಾಸಕ ಟಿ.ಡಿ.ರಾಜೇಗೌಡ ಕಿಡಿ
ಸ್ಥಳಕ್ಕೆ ಎಸ್ಪಿ ರಾಮರಾಜನ್ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿದ್ದು, ಗುಂಡು ಹಾರಿದ ಸ್ಥಳವನ್ನು ಪರಿಶೀಲನೆ ಮಾಡಿದರು. ಬಳಿಕ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.