Friday, June 9, 2023
Homeಇತರೆಕೇಸರಿ ದಿರಸಿನಲ್ಲಿರುವ ಪೊಲೀಸರಿಗೆ ತ್ರಿಶೂಲವನ್ನು ನೀಡಿ ಹಿಂಸೆಯ ದೀಕ್ಷೆಯನ್ನು ಕೊಟ್ಟುಬಿಡಿ : ಸಿದ್ದರಾಮಯ್ಯ ವಾಗ್ದಾಳಿ

ಕೇಸರಿ ದಿರಸಿನಲ್ಲಿರುವ ಪೊಲೀಸರಿಗೆ ತ್ರಿಶೂಲವನ್ನು ನೀಡಿ ಹಿಂಸೆಯ ದೀಕ್ಷೆಯನ್ನು ಕೊಟ್ಟುಬಿಡಿ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ”ಪೊಲೀಸರ ದಿರಿಸನ್ನು ಮಾತ್ರ ಯಾಕೆ ಬದಲಾಯಿಸಿದಿರಿ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆಯನ್ನು ನೀಡಿ ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದರು.

ಕೇಸರಿ ದಿರಿಸನ್ನು ಧರಿಸಿದ್ದ ಪೊಲೀಸರ ಪೋಟೊಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

”ಒಂದು ಕಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ ನಡೆಯುತ್ತಿರುವುದು ಮತ್ತು ಶಾಸಕರೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆಮಾಡುತ್ತಿರುವುದು. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲವನ್ನು ಹಂಚಿ ಹಿಂಸಾಚಾರಕ್ಕೆ ಕರೆ ನೀಡುತ್ತಿರುವುದು, ಇದಕ್ಕೆಲ್ಲ ಮುಖ್ಯಮಂತ್ರಿಗಳು ಬಹಿರಂಗ ಬೆಂಬಲವನ್ನು ನೀಡುತ್ತಿರುವುದು, ರಾಜ್ಯದಲ್ಲಿ ಸರ್ಕಾರ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

”ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಸಿಎಂ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಒಳ್ಳೆಯದು ಎಂದಿದ್ದಾರೆ.

”ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ನಿಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವವನ್ನು ಉಳಿಸಿ” ಎಂದು ತಿಳಿಸಿದ್ದಾರೆ.

Most Popular

Recent Comments