SM Krishna: ಕರ್ನಾಟಕ ಮಾಜಿ ಸಿಎಂ ಎಸ್. ಎಂ. ಕೃಷ್ಣ ನಿಧನ

(SM Krishna) ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿಯುತ್ತಿದ್ದು, ಇತ್ತ ಮಲೆನಾಡಿನಲ್ಲಿ ನೀರವ ಮೌನ ಆವರಿಸಿದೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಹೌದು, ಎಸ್. ಎಂ. ಕೃಷ್ಣ ಅವರು ತಮ್ಮ ವೈಯಕ್ತಿಕ ಜೀವನವನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತಾಲೂಕಿನ ಕುಡುಮಲ್ಲಿಗೆಯಲ್ಲಿ ಆರಂಭವಾಗಿತ್ತು. ಇವರ ಪತ್ನಿ ಪ್ರೇಮಾ ಕುಡುಮಲ್ಲಿಗೆ ಗ್ರಾಮದವರು. ಇಲ್ಲಿನ ಪ್ರಮುಖ ಅಡಿಕೆ ಬೆಳೆಗಾರ ಚಿನ್ನಪ್ಪಗೌಡ ಮತ್ತು ಕಮಲಾಕ್ಷಮ್ಮ ದಂಪತಿಗಳ ಪುತ್ರಿಯನ್ನು ಎಸ್ ಎಂ ಕೆ ವಿವಾಹವಾಗಿದ್ದರು.

SM Krishna: ಕರ್ನಾಟಕ ಮಾಜಿ ಸಿಎಂ ಎಸ್. ಎಂ. ಕೃಷ್ಣ ನಿಧನ
SM Krishna: ಕರ್ನಾಟಕ ಮಾಜಿ ಸಿಎಂ ಎಸ್. ಎಂ. ಕೃಷ್ಣ ನಿಧನ

ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


1966ರಲ್ಲಿ ಪ್ರೇಮಾ ಅವರು ಎಸ್.ಎಂ.ಕೃಷ್ಣ ಅವರೊಂದಿಗೆ ವಿವಾಹವಾಗಿದ್ದರು. ಆ ಹೊತ್ತಿಗಾಗಲೆ ಎಸ್. ಎಂ. ಕೃಷ್ಣ ಪುಜಾ ಸೋಷಿಯಲಿಸ್ಟ್ ಪಕ್ಷದಿಂದ ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರದ ಶಾಸಕರಾಗಿದ್ದರು.


ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಎಸ್. ಎಂ. ಕೃಷ್ಣ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮಕ್ಕೆ ಹಲವು ಭಾರಿ ಭೇಟಿ ನೀಡಿದ್ದರು. ಕೆಲವು ವರ್ಷದ ಹಿಂದೆಯು ಅವರು ತೀರ್ಥಹಳ್ಳಿಗೆ ಭೇಟಿ ನೀಡಿ ಕಾರ್ಯಕ್ರಮವೊಂದರಲ್ಲಿ ಕೂಡ ಭಾಗವಹಿಸಿದ್ದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.


ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್‌ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ


1999 ರಿಂದ 2004ರವರೆಗೆ ಕರ್ನಾಟಕದ ಸಿಎಂ ಆಗಿದ್ದರು. ಬಳಿಕ 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು. ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಎಸ್​​​ಎಂ ಕೃಷ್ಣ ಸಿಎಂ ಆಗಿದ್ದಾಗ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಎಸ್​ಎಂ ಕೃಷ್ಣ ಕರ್ನಾಟಕದ ಅತ್ಯಂತ ಪ್ರಭಾವಿ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬಳಿಕ ರಾಜಕೀಯ ತಿರುವುಗಳಿಂದಾಗಿ ಅವರು ಬಿಜೆಪಿ ಸೇರ್ಪಡೆಗೊಂಡರು.


ಇದನ್ನೂ ಓದಿ; ಗಂಡಸರಿಗೂ ಫ್ರೀ ಬಸ್‌; ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ


ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023 ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು. ಪಾಂಚಜನ್ಯ ಯಾತ್ರೆ ಮಾಡುವ ಮೂಲಕ ಕರ್ನಾಟಕದ ಮುಖ್ಯಮಂತ್ರಿಯಾದ ಎಸ್​ಎಂಕೃಷ್ಣ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ; ಇಲ್ಲಿದೆ ನೋಡಿ ಮುಖ್ಯ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು