Smart Meter: ಮನೆ, ಆಫೀಸ್, ಅಂಗಡಿಯ ವಿದ್ಯುತ್​ ಮೀಟರ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಂಧನ ಸಚಿವ

(Smart Meter:) ರಾಜ್ಯದ ಎಲ್ಲ ವಿದ್ಯುತ್​ ಮೀಟರ್‌ಗಳನ್ನು ಸ್ಮಾರ್ಟ್ ಮೀಟರ್ ಮಾಡಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್​ (KJ George) ಹೇಳಿದರು.


ಇದನ್ನೂ ಓದಿ:  BPL ಕಾರ್ಡ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; PUC ಪಾಸ್‌ ಆಗಿರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ


(Smart Meter:) ಮೊಬೈಲ್ ರೀಚಾರ್ಜ್ ರೀತಿ ಮೀಟರ್ ರೀಚಾರ್ಜ್:
ಸದ್ಯ ಕೆಲ ಮೀಟರ್‌ಗಳನ್ನು ಮಾತ್ರ ಸ್ಮಾರ್ಟ್​ಮೀಟರ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಮೀಟರ್​ಗಳನ್ನು ಸ್ಮಾರ್ಟ್​ ಮೀಟರ್​ ಮಾಡಲಾಗುವುದು. ಸ್ಮಾರ್ಟ್ ಮೀಟರ್ ಅಳವಡಿಕೆಯಿಂದ ಹೆಚ್ಚು ಅನುಕೂಲವಾಗಲಿದೆ. ಮೊಬೈಲ್ ರೀಚಾರ್ಜ್ ರೀತಿ ಮೀಟರ್ ರೀಚಾರ್ಜ್ ಮಾಡಬಹುದು ಎಂದರು.

ಪರಿಷ್ಕೃತ ವಿತರಣಾ ವಲಯ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿದೆ. ನಮ್ಮ ಸಂಪುಟವೂ ಒಪ್ಪಿದರೇ RDSS ಸ್ಕೀಮ್ ಜಾರಿ ಮಾಡುತ್ತೇವೆ. ಹೊಸ ಸ್ಮಾರ್ಟ್ ಮೀಟರ್​ಗೆ ಸಿಮ್ ರೀತಿ ಅಳವಡಿಸಲಾಗಿದೆ. ಒಂದು ಸ್ಮಾರ್ಟ್​​ ಮೀಟರ್‌ಗೆ ಐದು ಸಾವಿರ ರೂಪಾಯಿ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಕೇಂದ್ರ ಇಲಾಖೆ ಸೂಚನೆಯಂತೆ ಪಡೆಯಬೇಕಿದೆ‌. ಹಳೇ ಮೀಟರ್ ಹಿಂಪಡೆಯುವುದಿಲ್ಲ ಎಂದು ತಿಳಿಸಿದರು.


ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ ನಲ್ಲಿ ಜಾಬ್‌; SSLC, PUC ವಿದ್ಯಾರ್ಹತೆ


(Smart Meter:) ಸ್ಮಾರ್ಟ್‌ ವಿದ್ಯುತ್‌ ಮೀಟರ್‌ ಒಂದು ರೀತಿಯಲ್ಲಿ ಮೊದಲೇ ಪಾವತಿಸಿ ವಿದ್ಯುತ್‌ ಬಳಸುವ ವ್ಯವಸ್ಥೆ. ಈ ನೂತನ ವ್ಯವಸ್ಥೆಯಲ್ಲಿ ಮೊಬೈಲ್‌ ಫೋನ್‌ಗಳ ಮಾದರಿಯಲ್ಲೇ ವಿದ್ಯುತ್‌ ಬಳಕೆಗೂ ಪ್ರೀಪೇಯ್ಡ್‌ ರೀಚಾರ್ಜ್‌ ಕಾರ್ಡ್‌ ಪರಿಚಯಿಸಲಾಗುತ್ತಿದೆ. ಗ್ರಾಹಕರು, ಪ್ರೀಪೇಯ್ಡ್‌ ಮೊಬೈಲ್‌ ಸಿಮ್‌ ಮಾದರಿಯಲ್ಲಿ ಮೊದಲೇ ಹಣ ಕಟ್ಟಿ ವಿದ್ಯುತ್‌ ಸಂಪರ್ಕ ಪಡೆಯಬೇಕಾಗುತ್ತದೆ. ಪ್ರೀಪೇಯ್ಡ್‌ ಸಿಮ್‌ ಕಾರ್ಡ್‌ಗಳ ರೀತಿಯಲ್ಲೇ ಪ್ರೀಪೇಯ್ಡ್‌ ಸ್ಮಾರ್ಟ್‌ ಮೀಟರ್‌ಗಳೂ ಕಾರ್ಯ ನಿರ್ವಹಿಸುತ್ತವೆ.


ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!


ಪ್ರೀಪೇಯ್ಡ್‌ ಸಿಮ್‌ ಕಾರ್ಡ್‌ಗಳನ್ನು ರೀಚಾರ್ಜ್‌ ಮಾಡಿಸಿ ತಮಗೆ ಬೇಕಾದಷ್ಟು ಟಾಕ್‌ ಟೈಮ್‌ ಹಾಗೂ ಇಂಟರ್‌ನೆಟ್‌ ಡೇಟಾ ಪಡೆಯಬಹುದು. ಹಾಗೆಯೇ, ಗ್ರಾಹಕರು ಪ್ರೀಪೇಯ್ಡ್‌ ವಿದ್ಯುತ್‌ ಮೀಟರ್‌ಗಳನ್ನು ಆನ್‌ಲೈನ್‌ ಮೂಲಕ ಅಥವಾ ಸಮೀಪದ ವಿದ್ಯುತ್‌ ವಿತರಣಾ ಕಚೇರಿಗಳಲ್ಲಿ ರೀಚಾರ್ಜ್‌ ಮಾಡಿಸಿ ತಮಗೆ ಬೇಕಾದಷ್ಟು ಯೂನಿಟ್‌ಗಳನ್ನು ಪಡೆಯಬಹುದು.

Smart Meter: ಮನೆ, ಆಫೀಸ್, ಅಂಗಡಿಯ ವಿದ್ಯುತ್​ ಮೀಟರ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಂಧನ ಸಚಿವ
Smart Meter: ಮನೆ, ಆಫೀಸ್, ಅಂಗಡಿಯ ವಿದ್ಯುತ್​ ಮೀಟರ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಂಧನ ಸಚಿವ

ಇತ್ತೀಚಿನ ಜನಪ್ರಿಯ ಸುದ್ದಿಗಳು (Smart Meter:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?