ಈ ಹಿಂದೆ ಬಿಜೆಪಿಯ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಇನ್ನೋರ್ವ ಹುಡುಗಿ ಇರುವ ಖಾಸಗೀ ಕ್ಷಣಗಳ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗಿತ್ತು. ನಂತರದ ದಿನಗಳಲ್ಲಿ ಪಕ್ಷದ ಆದೇಶದಂತೆ ಸಚಿವಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದರು. ಪ್ರಸ್ತುತ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದಗೌಡರನ್ನು ಬಿಂಬಿಸುವ ಖಾಸಗಿ ಕ್ಷಣಗಳ ವಿಡಿಯೋ ಒಂದು ಎಲ್ಲೆಡೆ ಭಾರಿ ವೈರಲ್ ಆಗಿದೆ.
ಹುಡುಗಿಯೊಂದಿಗೆ ವೀಡಿಯೊ ಕಾಲಿನಲ್ಲಿ ಇರುವ ವ್ಯಕ್ತಿಯು ಸದಾನಂದ ಗೌಡ ಅವರನ್ನೇ ಹೋಲುತ್ತಾರೆ. ವಿಡಿಯೋದಲ್ಲಿರುವ ವ್ಯಕ್ತಿಯನ್ನು ಸದಾನಂದಗೌಡ ಅವರೇ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ. ಈ ಕೃತ್ಯದ ಕುರಿತು ಸದಾನಂದಗೌಡ ಅವರು ಸೈಬರ್ ಕ್ರೈಮ್ ಆಕ್ಟ್ ನ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು
ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ. ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ, ದಯವಿಟ್ಟು ನನಗೆ ಇನ್ ಬಾಕ್ಸ್ ಮಾಡಿ ಎಂದು ತಮ್ಮ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ.