Sunday, December 3, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ನಾಗರ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು

ಚಿಕ್ಕಮಗಳೂರು: ನಾಗರ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಹೆಸರಾಂತ ಉರಗತಜ್ಞರಲ್ಲಿ ಒಬ್ಬರಾಗಿದ್ದ ಚಿಕ್ಕಮಗಳೂರಿನ ಸ್ನೇಕ್ ನರೇಶ್(51) ತಾವೇ ಹಿಡಿದಿದ್ದ ನಾಗರ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಇದನ್ನೂ ಓದಿ; ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಸಾವು

ಇಂದು ಬೆಳಿಗ್ಗೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಸಮೀಪ ನಾಗರಹಾವೊಂದನ್ನು ಸೆರೆಹಿಡಿದಿದ್ದ ನರೇಶ್ ಹಾವನ್ನು ಚೀಲದಲ್ಲಿ ತುಂಬಿ ಸ್ಕೂಟಿಯ ಡಿಕ್ಕಿಯಲ್ಲಿ ಇಟ್ಟಿದ್ದರು. ಅದಾದ ಮೇಲೆ ಮತ್ತೊಂದು ಹಾವು ಹಿಡಿಯಲು ಕರೆ ಬಂದಿತ್ತು. ಸ್ಕೂಟಿಯ ಡಿಕ್ಕಿಯಲ್ಲಿ ಇಟ್ಟಿದ್ದ ಹಾವಿನ ಚೀಲವನ್ನು ಬಿಗಿಯಾಗಿ ಕಟ್ಟಲು ಎಂದು ಸ್ಕೂಟಿಯ ಡಿಕ್ಕಿ ಓಪನ್ ಮಾಡಿದಾಗ ಚೀಲದಿಂದ ಹೊರಬಂದಿದ್ದ ನಾಗರಹಾವು ನರೇಶ್ ಅವರಿಗೆ ಕಚ್ಚಿತ್ತು ಎಂದು ತಿಳಿದುಬಂದಿದೆ. ನರೇಶ್ ಅವರನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಅವರ ದೇಹಕ್ಕೆ ನಾಗರಹಾವಿನ ವಿಷವೇರಿ ಮೃತಪಟ್ಟಿದ್ದರು ಎನ್ನಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಸ್ನೇಕ್ ನರೇಶ್ ಅವರು 2013ರಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಹಾವುಗಳ ರಕ್ಷಣೆಯ ಮಹತ್ವದ ಬಗ್ಗೆ ಮಾಹಿತಿಯನ್ನು ಸಹ ನೀಡುತ್ತಿದ್ದರು. ಮನೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಷಕಾರಿ ಹಾವುಗಳು ಕಂಡಾಗಿ ತಕ್ಷಣ ನೆರವಿಗೆ ಬರುತ್ತಿದ್ದ ಸ್ನೇಕ್ ನರೇಶ್ ಸಾವಿಗೆ ಚಿಕ್ಕಮಗಳೂರು ನಗರದ ಜನತೆ ತಮ್ಮ ಕಂಬಿನಿ ಮಿಡಿದಿದ್ದಾರೆ

ಚಿಕ್ಕಮಗಳೂರು: ಅನುದಾನಕ್ಕೆ ಬ್ರೇಕ್, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿರುವ ವರದಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ

ಅನುದಾನಕ್ಕೆ ಬ್ರೇಕ್ ಹಾಕಿರುವ ಕಾರಣದಿಂದಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?

ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತಡೆ ಹಿಡಿದ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರು ತಾಲ್ಲೂಕು ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ನೂರಾರು ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನಾ ಮೆರವಣಿಗೆ ಮಾಡಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

Most Popular

Recent Comments