Solar Agriculture: ಕೃಷಿ ಪಂಪ್ ಸೆಟ್ ಗೆ ಫ್ರೀ ವಿದ್ಯುತ್!

0
16

(Solar Agriculture:) 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಇಂಧನ ಇಲಾಖೆಗೆ ಭಾರೀ ಪ್ರಮಾಣದ ಅನುದಾನ ಘೋಷಣೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಎಂಬ ಹೊಸ ಯೋಜನೆಯನ್ನು ಪ್ರಕಟಿಸಿದ್ದಾರೆ. ಕೃಷಿ ಪಂಪ್‌ಸೆಟ್‌ಗಳು ಹಾಗೂ ಗೃಹಬಳಕೆಯ ಉಚಿತ ವಿದ್ಯುತ್ ಯೋಜನೆಗಳಿಗಾಗಿ ಒಟ್ಟಾರೆ ಸುಮಾರು 30,000 ಕೋಟಿ ರೂ. (ನಿಖರವಾಗಿ 29,868 ಕೋಟಿ ರೂ.) ಮೀಸಲಿಟ್ಟಿರುವುದು ಈ ಬಜೆಟ್‌ನ ಪ್ರಮುಖ ಅಂಶವಾಗಿದೆ.


ನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಪರಿಸರ ಸ್ನೇಹಿ ಇಂಧನ ಬಳಕೆ ಹಾಗೂ ಕೃಷಿ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ.

ಕುಸುಮ್-ಸಿ (Kusum-C) ಮಾದರಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಸುಮಾರು 10,500 ಕೋಟಿ ರೂ. ವೆಚ್ಚದಲ್ಲಿ ಕೆಪಿಟಿಸಿಎಲ್ (KPTCL) ಉಪಕೇಂದ್ರಗಳಲ್ಲಿ 3,000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುತ್ತದೆ. ಜೊತೆಗೆ ನೀರಾವರಿ ಪಂಪ್‌ಸೆಟ್‌ಗಳ ವಿಕೇಂದ್ರೀಕೃತ ಫೀಡರ್‌ಗಳಿಗೆ 2,777 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವ್ಯವಸ್ಥೆ ಅಳವಡಿಸಲಾಗುತ್ತದೆ.


ನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.


ರಾಜ್ಯದ ಸುಮಾರು 21 ಲಕ್ಷ ರೈತರಿಗೆ ಸೇರಿದ 36 ಲಕ್ಷಕ್ಕೂ ಹೆಚ್ಚು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲು 19,290 ಕೋಟಿ ರೂ. ಅನುದಾನ ನೀಡಲಾಗಿದೆ.

Solar Agriculture: ಕೃಷಿ ಪಂಪ್ ಸೆಟ್ ಗೆ ಫ್ರೀ ವಿದ್ಯುತ್!
Solar Agriculture: ಕೃಷಿ ಪಂಪ್ ಸೆಟ್ ಗೆ ಫ್ರೀ ವಿದ್ಯುತ್!

ಇತ್ತೀಚಿನ ಜನಪ್ರಿಯ ಸುದ್ದಿಗಳು (Solar Agriculture:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ