Solar Park: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ

(Solar Park) ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವುದರ ಕುರಿತು ರಾಜ್ಯ ಸರ್ಕಾರದಿಂದ ಸೋಲಾರ್ ಪಾರ್ಕ್ ಸ್ಥಾಪಿಸಲಾಗುತ್ತಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಹೌದು, ಕುಸುಮ್ ಯೋಜನೆಯಡಿ ಬಯಲು ಸೀಮೆಯಾದ ಚಿತ್ರದುರ್ಗ ಜಿಲ್ಲೆಯಲ್ಲಿ 9 ಕಡೆಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿ ಸುಮಾರು 60 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಯೋಜಿಸಲಾಗಿದೆ.

ಈಗಾಗಲೆ ಹೊಸದುರ್ಗ ತಾಲೂಕು ನೀರಗುಂದ ಗ್ರಾಮ ಬಳಿ ಕುಸುಮ್-ಸಿ ಯೋಜನೆಯಡಿ 3.1 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ 12 ಎಕರೆ ಸರ್ಕಾರಿ ಭೂಮಿಯಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೊಂಡು. ಮಾರಬಗಟ್ಟ, ಸಾಣೆಹಳ್ಳಿ, ಹೊಸದುರ್ಗ ಭಾಗದವರೆಗಿನ ಸುಮಾರು 2 ಸಾವಿರಕ್ಕೂ ಹೆಚ್ಚಿನ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿತ್ಯ ಹಗಲು ಹೊತ್ತಿನಲ್ಲಿ ಅಂದಾಜು 7 ಗಂಟೆಗಳ ಕಾಲ ಗುಣಮಟ್ಟದ ಉಚಿತ ವಿದ್ಯುತ್ ದೊರೆಯುತ್ತಿದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 19 ನೇ ಕಂತಿನ 2000 ಹಣ ಜಮಾ!


(Solar Park) ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಂಚೀಪುರ ಗ್ರಾಮದಲ್ಲಿ 5.4 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 27 ಎಕರೆ ಸರ್ಕಾರಿ ಭೂಮಿ ಗುರುತಿಸಿ ಏಜೆನ್ಸಿ ಅವರಿಗೆ ನೀಡಲಾಗಿದ್ದು, ಕೆಲವೇ ತಿಂಗಳಿನಲ್ಲಿ ಇಲ್ಲಿ ವಿದ್ಯುತ್ ಉತ್ಪಾದನೆ ಪ್ರಾರಂಭವಾಗಲಿದೆ. ಹೊಸದುರ್ಗ ಪಟ್ಟಣಕ್ಕೆ ಸಮೀಪ 6.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಭೂಮಿ ಗುರುತಿಸುವ ಕಾರ್ಯ ನಡೆದಿದೆ. ಎರಡನೆ ಹಂತದಲ್ಲಿ ಇದೇ ತಾಲ್ಲೂಕಿನ ಗರಗ ಗ್ರಾಮ ಬಳಿ 7.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 38 ಎಕರೆ ಭೂಮಿಯ ಅಗತ್ಯವಿದ್ದು, ಇಲ್ಲೂ ಕೂಡ ಜಮೀನು ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್‌ ಸೂಚನೆ; ಏನದು ಸೂಚನೆ?


ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮ ಬಳಿ 11 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಯೋಜಿಸಿದ್ದು, ಭೂಮಿ ಗುರುತಿಸಿಲ್ಲ, ಗುಂಡೇರಿ ಗ್ರಾಮ ಬಳಿ 13 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 60 ಎಕರೆ ಭೂಮಿಯನ್ನು ಈಗಾಗಲೆ ಏಜೆನ್ಸಿಗೆ ನೀಡಿ ಸೋಲಾರ್ ಪಾರ್ಕ್ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಚಿತ್ರದುರ್ಗ ತಾಲ್ಲೂಕು ಮಾಡನಾಯಕನಹಳ್ಳಿ ಗ್ರಾಮ ಬಳಿ 6.6 ಮೆಗಾವ್ಯಾಟ್ ಉತ್ಪಾದನೆಗಾಗಿ 33 ಎಕರೆ ಸರ್ಕಾರಿ ಭೂಮಿ ಗುರುತಿಸಿ ನೀಡಲಾಗಿದ್ದು, ಇಲ್ಲೂ ಕೂಡ ಸೋಲಾರ್ ಪಾರ್ಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.


ಇದನ್ನೂ ಓದಿ: ವಿದ್ಯುತ್ ಉಳಿತಾಯದ ಮಹತ್ವದ ಮಾಹಿತಿ ಹಂಚಿಕೊಂಡ ಬೆಸ್ಕಾಂ; ಈ ಯೋಜನೆಯಲ್ಲಿ ಸಿಗಲಿದೆ 78 ಸಾವಿರ ವರೆಗೆ ಸಬ್ಸಿಡಿ


ಈ ಸೋಲಾರ್ ಪಾರ್ಕ್ ಯೋಜನೆಯೂ ಕುಸುಮ್ ಯೋಜನೆಯಡಿ ಬರಲಿದ್ದು, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರಗಳು ಇರುವ ಸ್ಥಳಗಳ ಹತ್ತಿರ ಒಂದು ಮೆಗಾ ವ್ಯಾಟ್ ಉತ್ಪಾದನೆಗೆ ಕನಿಷ್ಟ ಸುಮಾರು 4 ಎಕರೆಯಂತೆ ಮೆಗಾ ವ್ಯಾಟ್ ಸಾಮರ್ಥ್ಯಕ್ಕೆ ಅನುಗುಣವಾಗಿ ಜಮೀನನ್ನು ಗುರುತಿಸಿ ಅದರಲ್ಲಿ ವಿದ್ಯುತ್ ಉಪಕೇಂದ್ರದ ಸಾಮರ್ಥ್ಯಕ್ಕೆ ಅನುಗುಣವಾಗಿ ಸೋಲಾರ್ ಪಾರ್ಕ್‌ಗಳನ್ನು ಸ್ಥಾಪನೆ ಮಾಡಲಾಗುವುದು.


ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಪಿಯುಸಿ ವಿದ್ಯಾರ್ಥಿಗಳಿಗೆ 2,500 ಯಿಂದ 3,500ರ ವರೆಗೆ ಸ್ಕಾಲರ್‌ ಶಿಪ್


ಹೀಗೆ ಈ ಸೋಲಾರ್ ಪಾರ್ಕ್‌ಗಳಿಂದ ವಿದ್ಯುತ್ ಉತ್ಪಾದನೆ ಮಾಡಿ ಅಲ್ಲಿಯೇ ಪೂರೈಕೆ ಮಾಡಿಕೊಡಲಾಗುವುದು. ಯೋಜನೆಯಡಿ ಖಾಸಗಿಯವರು ಬಂಡವಾಳ ಹೂಡಿಕೆ ಮಾಡುತ್ತಾರೆ. ಸರ್ಕಾರದಿಂದ ಲಭ್ಯವಿರುವೆಡೆ ಸರ್ಕಾರಿ ಭೂಮಿ ನೀಡಲಾಗುವುದು. ಅಲ್ಲದೆ ಸೋಲಾರ್ ಘಟಕಗಳಲ್ಲಿ ಉತ್ಪಾದಿಸುವ ವಿದ್ಯುತ್‌ ಅನ್ನು ಸರ್ಕಾರವೇ ಗರಿಷ್ಠ 3.17 ರೂ. ನಂತೆ ಖರೀದಿ ಮಾಡುತ್ತದೆ.

Solar Park: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ
Solar Park: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ

ಇದನ್ನೂ ಓದಿ: ಜಸ್ಟ್‌ 10th/PUC ಪಾಸ್‌ ಆದವರಿಗೆ ಜಾಬ್‌; 23,000 ದಿಂದ ಸಂಬಳ, ಅರ್ಜಿ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ