(Solar Pump Sets) ರಾಜ್ಯದ 18 ಸಾವಿರ ರೈತರು ಕುಸುಮ್ ಯೋಜನೆಯಡಿ ಸೌರ ಪಂಪ್ ಸೆಟ್ ಪಡೆಯಲು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ತಿಳಿದ್ದಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಪಿಎಂ ಕುಸುಮ್ ಯೋಜನೆಯ ಸಮಪರ್ಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ ಕುರಿತು ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18,000 ರೈತರು ಸೌರಪಂಪ್ ಸೆಟ್ ಪಡೆಯಲು ಸೌರಮಿತ್ರ ವೆಬ್ ಸೈಟ್/ ಆಯಪ್ ನಲ್ಲಿ ನೋಂದಣಿ ಮಾಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!
ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಈ ಯೋಜನೆ ರೂಪಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಚಾಲಿತ ಪಂಪ್ ಸೆಟ್ ಗಳ ಬಳಕೆಗೆ ಒತ್ತು ನೀಡಲಾಗುತ್ತಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್ ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.
ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ
ಹಾಗಾದರೆ ನೋಂದಣಿ ಹೇಗೆ?:
ರೈತರು ತಮ್ಮ ಆಧಾರ್, ಆರ್‌ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; 35 ಸಾವಿರದಿಂದ ವೇತನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ
ರೈತರ ನೋಂದಣಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಲ್ ಸೆಂಟರ್ ಸಂಖ್ಯೆ 080-22202100 ಗೆ ಕರೆ ಮಾಡಬಹುದಾಗಿದೆ.

ಇದನ್ನೂ ಓದಿ: ಉದ್ಯೋಗಾಂಕ್ಷಿಗಳ ಗಮನಕ್ಕೆ; ಇಂದು, ನಾಳೆ ಬೃಹತ್ ಉದ್ಯೋಗ ಮೇಳ; ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






