(Sowing Seed) ಕೆಲವೆಡೆ ವರುಣನ ಆಗಮನದಿಂದ ರೈತರಲ್ಲಿ ಒಂದಷ್ಟು ಸಮಾಧಾನ ತಂದಿದ್ದು ಬಿತ್ತನೆಗೆ ಮುಂದಾಗಿದ್ದಾರೆ. ಆದ್ದರಿಂದ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಕೃಷಿ ಇಲಾಖೆ ಹೇಳಿಕೊಂಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
14 ವಿಧದ ಬಿತ್ತನೆ ಬೀಜಗಳ ವಿತರಣೆಗೆ ಅಗತ್ಯ ಕ್ರಮ:
ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 114.49 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವುದಾಗಿ ಅಂದಾಜಿಸಿದ್ದು, ಈ ಪೈಕಿ ಮುಂಗಾರು ಹಂಗಾಮಿನ 82.48 ಲಕ್ಷ ಹೆಕ್ಟೇರ್ ಬಿತ್ತನೆಗೆ ಅಗತ್ಯವಾದ 26.80 ಲಕ್ಷ ಮೆಟ್ರಿಕ್ ರಸಗೊಬ್ಬರ ಈಗಾಗಲೇ ದಾಸ್ತಾನಿದೆ. 14 ವಿಧದ ಬಿತ್ತನೆ ಬೀಜಗಳ ವಿತರಣೆಗೂ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತದೆ ಎಂಬ ಮುನ್ನೆಚ್ಚರಿಕೆಯಿಂದಾಗಿ ಫೆಬ್ರವರಿಯಲ್ಲೇ ಬಿತ್ತನೆ ಬೀಜ ಖರೀದಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿತ್ತು ಎಂದು ಇಲಾಖೆ ಮೂಲಗಳು ತಿಳಿಸಿವೆ.
114.49 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ:
2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟಾರೆ 114.49 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಈ ಪೈಕಿ ಮುಂಗಾರು ಹಂಗಾಮಿನಲ್ಲಿ 15.40 ಲಕ್ಷ ಹೆಕ್ಟೇರ್ ನಲ್ಲಿ ಮೆಕ್ಕೆ ಜೋಳ, 15 ಲಕ್ಷ ಹೆಕ್ಟೇರ್ ತೊಗರಿ, 10.60 ಲಕ್ಷ ಹೆಕ್ಟೇರ್ ಭತ್ತ, 7.30 ಲಕ್ಷ ಹೆಕ್ಟೇರ್ ರಾಗಿ ಸೇರಿದಂತೆ ಒಟ್ಟಾರೆ 82.48 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.
ಇದನ್ನೂ ಓದಿ: ಮಳೆ ಹಾನಿ; ಗ್ರಾಹಕರ ಸಮಸ್ಯೆ ಪರಿಹಾರಕ್ಕೆ 8 ಜಿಲ್ಲೆಗೆ ವಾಟ್ಸಪ್ ಸಂಖ್ಯೆ; ಜಿಲ್ಲಾವಾರು ನಂಬರ್ ಇಲ್ಲಿದೆ
8.90 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ:
ಭತ್ತ, ಶೇಂಗಾ, ಮೆಕ್ಕೆಜೋಳ, ರಾಗಿ, ತೊಗರಿ, ಉದ್ದು, ಅಲಸಂದೆ ಸೇರಿದಂತೆ 14 ವಿಧದ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದ್ದು, ಮುಂಗಾರು ಹಂಗಾಮಿಗೆ 5.53 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಅಗತ್ಯವಿದೆ. ನಮ್ಮಲ್ಲಿ 8.90 ಲಕ್ಷ ಟನ್ ಬಿತ್ತನೆ ಬೀಜ ದಾಸ್ತಾನಿದ್ದು, ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
75 ಸಾವಿರ ಕ್ವಿಂಟಲ್ ಬೀಜದ ಭತ್ತ ಅವಶ್ಯಕತೆಯಿದ್ದು, ನಮ್ಮಲ್ಲಿ 1.05 ಲಕ್ಷ ಕ್ವಿಂಟಲ್ ದಾಸ್ತಾನಿದೆ. 25,500 ಕ್ವಿಂಟಲ್ ಬಿತ್ತನೆ ರಾಗಿ ಬೇಕಾಗಲಿದ್ದು, 49,485 ಕ್ವಿಂಟಲ್ ದಾಸ್ತಾನಿದೆ. ಒಂದು ಲಕ್ಷ ಕ್ವಿಂಟಲ್ ಮೆಕ್ಕೆಜೋಳದ ಅಗತ್ಯವಿದ್ದು 1.68 ಲಕ್ಷ ಕ್ವಿಂಟಲ್ ದಾಸ್ತಾನಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.
ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತರಿಗೆ ತಲಾ 3,000 ರೂ ಜಮೆ; ಯಾರಿಗೆ ಇಲ್ಲಿದೆ ನೋಡಿ ಡಿಟೈಲ್ಸ್
ರಸಗೊಬ್ಬರ ದಾಸ್ತಾನು:
39 ಲಕ್ಷ ಕ್ವಿಂಟಲ್ ಡಿಎಪಿ, 13 ಲಕ್ಷ ಕ್ವಿಂಟಲ್ ಎಂಓಪಿ, 99 ಲಕ್ಷ ಕ್ವಿಂಟಲ್ ಕಾಂಪ್ಲೆಕ್ಸ್, 10.75 ಲಕ್ಷ ಕ್ವಿಂಟಲ್ ಯೂರಿಯಾ, 95 ಸಾವಿರ ಕ್ವಿಂಟಲ್ SSP ಸೇರಿದಂತೆ ಮುಂಗಾರು ಹಂಗಾಮಿಗೆ 26.80 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಅಗತ್ಯವಿದೆ.
ಇದನ್ನೂ ಓದಿ: ಕಾಫಿ ಮಂಡಳಿಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಕಳೆದ ಸಾಲಿನಲ್ಲಿ ಹಿಂಗಾರಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಕುಂಠಿತವಾಗಿದ್ದರಿAದ 13.13 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಹಾಗೆಯೇ ಉಳಿದುಕೊಂಡಿದೆ. ಜೊತೆಗೆ ಕೇಂದ್ರವು ಏಪ್ರಿಲ್ ನಲ್ಲಿ ರಸಗೊಬ್ಬರ ಸರಬರಾಜು ಮಾಡಿದ್ದು, ಪ್ರಸಕ್ತ 15 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರದಲ್ಲಿ ಈಗಾಗಲೇ ಶೇ.55 ರಷ್ಟು ದಾಸ್ತಾನಿರುವುದು ವಿಶೇಷವಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply