(Special Action Force:) ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ತಡೆ ಪ್ರಯತ್ನವಾಗಿ ಹೊಸದಾಗಿ ವಿಶೇಷ ಕಾರ್ಯಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್-ಎಸ್ಎಎಫ್) ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?
ಸದ್ಯದ ರಾಜ್ಯ ನಕ್ಸಲ್ ನಿಗ್ರಹ ಪಡೆಯಲ್ಲಿನ ಒಟ್ಟು 656 ಹುದ್ದೆಗಳಲ್ಲಿ 248 ಹುದ್ದೆಗಳನ್ನು ಬೇರ್ಪಡಿಸಿ ಈ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಡಿಐಜಿಪಿ ನೇತೃತ್ವದ ಈ ಕಾರ್ಯಪಡೆ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದೊಂದು ತುಕಡಿಗಳನ್ನು ಹೊಂದಿರಲಿದೆ. ವಲಯ ಐಜಿಪಿ ನಿಯಂತ್ರಣದಲ್ಲಿ ವಿಶೇಷ ಕಾರ್ಯಪಡೆ ಕಾರ್ಯ ನಿರ್ವಹಿಸಲಿದೆ.
(Special Action Force:) ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿದ ಕೋಮು ಸಂವೇದನೆಯಿಂದಾಗಿ ಸಣ್ಣ ಘಟನೆಗಳೂ ಕಾನೂನು -ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ದ್ವೇಷ ಭಾಷಣ, ಹಿಂಸಾಚಾರ ಮತ್ತು ಕೋಮು ಹತ್ಯೆ ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ತೀರ್ಮಾನ ಕೈಗೊಂಡಿದೆ.
ಕೋಮು ಹಿಂಸೆಗೆ ಕಾರಣವಾಗುವ ಸಂಗತಿಗಳ ಮೇಲೆ ಕಣ್ಗಾವಲು ಹಾಗೂ ಗುಪ್ತಚರ ವ್ಯವಸ್ಥೆ ಬಲಪಡಿಸಿ ನಿಗಾ ವಹಿಸುವ ಜತೆಗೆ ಮೂಲಭೂತವಾದ ರೂಪುಗೊಳ್ಳುವುದನ್ನು ಗುರುತಿಸುವ ಮುನ್ನೆಚ್ಚರಿಕೆ ಕ್ರಮಗಳನ್ನು ಎಸ್ಎಎಫ್ ಮಾಡಲಿದೆ.
ಕೋಮು ದೃಷ್ಟಿಯಿಂದ ದಕ್ಷಿಣ ಕನ್ನಡ ಪ್ರದೇಶವು ಹೆಚ್ಚು ಸೂಕ್ಷ್ಮವಾಗಿದ್ದು, ಶಾಂತಿ, ಸಾಮಾಜಿಕ ಒಗ್ಗಟ್ಟು ಮತ್ತು ಕಾನೂನು ಪಾಲನೆ ದೃಷ್ಟಿಯಿಂದ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಪ್ರಸ್ತಾವನೆ ಸಲ್ಲಿಸಿದ್ದರು. ಜೊತೆಗೆ ನೈತಿಕ ಪೊಲೀಸ್ಗಿರಿ, ದ್ವೇಷ ಭಾಷಣ ಮತ್ತು ಹಿಂಸಾಚಾರ ಪ್ರಕರಣಗಳ ತಡೆಗೆ ಸೂಕ್ತ ಕ್ರಮಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಆಧರಿಸಿ ಈ ಕಾರ್ಯಪಡೆ ರಚಿಸಲಾಗಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ €18,750 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
(Special Action Force:) ಎಎನ್ಎಫ್ ಮುಂದುವರಿಕೆ:
ಛತ್ತೀಸ್ಗಡ ಮತ್ತು ಜಾರ್ಖಂಡ್ ರಾಜ್ಯಗಳಿಂದ ಕೆಲವು ನಕ್ಸಲರು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಗಡಿ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು (ಎಎನ್ಎಫ್) ಮುಂದಿನ 3 ವರ್ಷಗಳ ಕಾಲ ಮುಂದುವರಿಸುವ ನಿರ್ಧಾರವನ್ನೂ ಸರ್ಕಾರ ಕೈಗೊಂಡಿದೆ.
ಎಎನ್ಎಎಫ್ (ನಕ್ಸಲ್ ನಿಗ್ರಹ ಪಡೆ)ನಲ್ಲಿ ಒಟ್ಟು 667 ಹುದ್ದೆಗಳಿದ್ದು, ಇವರಲ್ಲಿ 248 ಹುದ್ದೆಗಳನ್ನು ಎಸ್ಟಿಎಫ್ಗೆ ನಿಯೋಜಿಸಿ ಉಳಿದ 376 ಹುದ್ದೆಗಳನ್ನು ಎಎನ್ಎಫ್ನಲ್ಲಿಯೇ ಮುಂದಿನ 3ವರ್ಷಗಳವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ.
ಎಸ್ಟಿಎಫ್ನಲ್ಲಿ ಡಿಐಜಿಪಿ 1, ಡಿವೈಎಸ್ಪಿ (ಸಿವಿಲ್ 1, ಸಹಾಯಕ ಕಮಾಂಡೆಂಟ್ 1, ಪಿಐ/ಆರ್ಪಿಐ 4, ಪಿಎಸ್ಐ/ಆರ್ಎಸ್ಐ/ಎಸ್ಐ 16, ಸಿಹೆಚ್ಸಿ 60, ಸಿಪಿಸಿ/ಎಪಿಸಿ 150, ಅನುಯಾಯಿ 15 ಮಂದಿ ಸಿಬ್ಬಂದಿ ನಿಯೋಜಿಸಲು ನಿರ್ಧರಿಸಲಾಗಿದೆ.
ಹೊಸತಾಗಿ ಸ್ಥಾಪನೆಯಾಗುವ ವಿಶೇಷ ಕಾರ್ಯಪಡೆಯು ಮೂರು ಕಂಪನಿಗಳನ್ನು ಹೊಂದಲಿದೆ. ಈ ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದ.ಕ. ಜಿಲ್ಲೆಗಳಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!
(Special Action Force:) ಕರ್ತವ್ಯ ಮತ್ತು ಜವಾಬ್ದಾರಿ:
* ದ್ವೇಷ ಭಾಷಣ, ಉದ್ರೇಕಕಾರಿ ಘಟನೆಗಳು ಮತ್ತು ಕೋಮು ಸಂಬಂಧಿತ ಘಟನೆಗಳಿಗಾಗಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು, ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಲು, ಮೇಲ್ವಿಚಾರಣೆಮಾಡಲು ತಾಂತ್ರಿಕ ಕೋಶ ಒಳಗೊಂಡ ಗುಪ್ತಚರ ಘಟಕವನ್ನು ಹೊಂದುವುದು.
* ಸಂಭಾವ್ಯ ಕೋಮು ಹಿಂಸಾಚಾರದ ಬಗ್ಗೆ ಕಣ್ಣಾವಲು ಮತ್ತು ಮಾನವ ಗುಪ್ತಚರ ಮೂಲಕ ಎಚ್ಚರಿಕೆ ವ್ಯವಸ್ಥೆ ರಚಿಸುವುದು.
* ಪ್ರಾಬಲ್ಯದ ಮೂಲಕ ವಿಶ್ವಾಸವೃದ್ಧಿ ಕ್ರಮಗಳನ್ನು ಕೈಗೊಳ್ಳುವುದು.
* ಮೂಲಭೂತೀಕರಣ ಗುರುತಿಸಲು ಮತ್ತು ಮೇಲ್ವಿಚಾರಣೆ ಮಾಡಲು ಕ್ರಮ ಕೈಗೊಳ್ಳುವುದು.
* ವಲಯ ಐಜಿಪಿಯವರು ಕೋಮುಗಲಭೆ ಸಂದರ್ಭ ವಿಶೇಷ ಕಾರ್ಯಪಡೆ ಅಧಿಕಾರಿ, ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳುವುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Special Action Force:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





