Special Occasional Leave: ಕಾಲೇಜು ಸಿಬ್ಬಂದಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ

(Special Occasional Leave:) ರಾಜ್ಯ ಸರ್ಕಾರವು ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ಮಹತ್ವದ ಆದೇಶವನ್ಜು ಹೊರಡಿಸಿದೆ. ಹಾಗಾದರೆ ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ


ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಕೋರಲಾಗಿತ್ತು.

ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಗರಿಷ್ಟ 06 ತಿಂಗಳುಗಳ ಮಿತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವಂತೆಯೇ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ಸ್ವಯಂ ಚಾಲಿತವಾಗಿ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ.


ನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್


ಒಂದು ವೇಳೆ ಅಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಲಭ್ಯವಿರುವ ಅಸಾಧಾರಣ ರಜೆಗಳನ್ನು ಒಳಗೊಂಡಂತೆ ಎಲ್ಲಾ ರಜೆಗಳನ್ನು ಮೊದಲು ಬಳಸಿಕೊಂಡು ನಂತರ ಅಗತ್ಯವಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದು ವಿಶೇಷ ಸಾಂದರ್ಭಿಕ ರಜೆಗಳನ್ನು ಮಂಜೂರು ಮಾಡುವ ಬಗ್ಗೆ ಪರಿಶೀಲಿಸಬಹುದಾಗಿದೆ ಎಂದು ನಿರ್ದೇಶಿಸಿದೆ.

ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ರಜೆ ಸೌಲಭ್ಯ ಮಂಜೂರಾತಿ ಸಂಬಂಧ ಅಗತ್ಯ ಕ್ರಮವಹಿಸುವಂತೆ ತಿಳಿಸಲಾಗಿದೆ.

Special Occasional Leave: ಕಾಲೇಜು ಸಿಬ್ಬಂದಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ
Special Occasional Leave: ಕಾಲೇಜು ಸಿಬ್ಬಂದಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ

ನ್ನೂ ಓದಿ:  ರಾಜ್ಯದ ಜನತೆಗೆ ಗುಡ್ ನ್ಯೂಸ್; ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು (Special Occasional Leave:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ