ಮೈಸೂರು : ಮಹತ್ವದ ಬೆಳವಣಿಗೆಯಲ್ಲಿ ಸಂಸದ ವಿ ಶ್ರೀನಿವಾಸ ಪ್ರಸಾದ್ ರವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಗುತ್ತಿದ್ದೇನೆ ಎಂದು ಹೇಳುವ ಮೂಲಕ ಸಕ್ರಿಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು ನಾನು ನನ್ನ ಆತ್ಮ ತೃಪ್ತಿಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಿವೃತ್ತಿಯನ್ನು ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣದಿಂದ ಮತ್ತೆ ಸ್ಪರ್ಧೆ ಮಾಡಿದ್ದೆ.
ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.ನಾನು ಹೇಳುತ್ತಿರುವ ಈ ಮಾತಿನಿಂದ ನಾನು ಹಿಂದೆ ಸರಿಯುವುದೂ ಇಲ್ಲ ಎಂದು ವಿ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.