Tuesday, November 28, 2023
Homeಆಧ್ಯಾತ್ಮಸಾರ್ವಜನಿಕ ಗಣೇಶ ಉತ್ಸವವನ್ನು ನಿಷೇಧಿಸಿದ ಸರ್ಕಾರ: ಶ್ರೀರಾಮ ಸೇನೆಯ ಕಾರ್ಯಕರ್ತರಿಂದ ಪ್ರತಿಭಟನೆ

ಸಾರ್ವಜನಿಕ ಗಣೇಶ ಉತ್ಸವವನ್ನು ನಿಷೇಧಿಸಿದ ಸರ್ಕಾರ: ಶ್ರೀರಾಮ ಸೇನೆಯ ಕಾರ್ಯಕರ್ತರಿಂದ ಪ್ರತಿಭಟನೆ

ಧಾರವಾಡ: ರಾಜ್ಯ ಸರ್ಕಾರ ಈ ಬಾರಿಯೂ ಸಾರ್ವಜನಿಕ ಗಣಪತಿಯ ಪ್ರತಿಷ್ಟಾಪನೆಯನ್ನು ನಿಷೇಧ ಮಾಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತ್ರತ್ವದಲ್ಲಿ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ತೀವ್ರವಾಗಿ ಪ್ರತಿಭಟನೆಯನ್ನು ನಡೆಸಿದರು

ಜಿಲ್ಲಾಧಿಕಾರಿ ಕಚೇರಿ ಎದುರು ಗಣೇಶ ಮೂರ್ತಿಯನ್ನು ಇಟ್ಟು, ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗಿ ಆಕ್ರೋಶವನ್ನು ಹೊರಹಾಕಿದ ಶ್ರೀರಾಮ ಸೇನೆಯ ಕಾರ್ಯಕರ್ತರು, ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡೆಯೇ ತೀರುತ್ತೇವೆ ಎಂದು ಘೋಷಣೆಯನ್ನು ಕೂಗುತ್ತ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಕೂಡಲೇ ಸರ್ಕಾರ ಸಾರ್ವಜನಿಕ ಗಣಪತಿ ಮೂರ್ತಿ ಪ್ರತಿಷ್ಟಾನಕ್ಕೆ ಅವಕಾಶವನ್ನು ನೀಡಬೇಕು ಎಂದು ಶ್ರೀ ರಾಮ ಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಮೋದ ಮುತಾಲಿಕ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರವು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಎಲ್ಲದಕ್ಕೂ ಅವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕ ಗಣೇಶೋತ್ಸವವನ್ನು ನಿಷೇಧ ಮಾಡಿದ್ದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

 

Most Popular

Recent Comments