(SSLC RESULT) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇಂದು 2023-24ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆ-1ರ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ವರ್ಷ 8.69 ಲಕ್ಷ ವಿದ್ಯಾರ್ಥಿಗಳು SSLC ವಾರ್ಷಿಕ ಪರೀಕ್ಷೆ-1ಕ್ಕೆ ನೋಂದಾವಣೆ ಮಾಡಿದ್ದರು. ಮಂಡಲಿಯು ಕರ್ನಾಟಕದಾದ್ಯಂತ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಂದು ತಮ್ಮ ರಿಸಲ್ಟ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; APL ಹಾಗೂ BPL ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
2023-24ನೇ ಸಾಲಿನ SSLC ರಿಸಲ್ಟ್ ಇದೀಗ ಪ್ರಕಟವಾಗಿದ್ದು, ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗ ಪೈಕಿ 6,31,204 ವಿದ್ಯಾರ್ಥಿಗಳು ಪಾಸಾಗಿದ್ದು, ಈ ಸಾಲಿನಲ್ಲಿ ಶೇಕಡ 73.40 ಫಲಿತಾಂಶ ದಾಖಲಾಗಿದೆ.
ಲಿಂಗವಾರು ಒಟ್ಟಾರೆ ಫಲಿತಾಂಶ:
ಬಾಲಕರು: 2,87,416 (65.90%)
ಬಾಲಕಿಯರು; 3,43,788 (81.11%)
SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ.
ಶಾಲಾ ವಿಧಗಳವಾರು SSLC ಫಲಿತಾಂಶ:
* 5906 ಸರ್ಕಾರಿ ಶಾಲೆಗಳಿಂದ ಪರೀಕ್ಷೆ ಬರೆದ 3,36,533 ವಿದ್ಯಾರ್ಥಿಗಳ ಪೈಕಿ 243,851 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
* 6144 ಅನುದಾನರಹಿತ ಶಾಲೆಗಳ ಪೈಕಿ ಪರೀಕ್ಷೆ ಬರೆದ 2,58,753 ವಿದ್ಯಾರ್ಥಿಗಳ ಪೈಕಿ, 2,23,720 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
* 3606 ಅನುದಾನಿತ ಶಾಲೆಗಳ ಪೈಕಿ 2,07,821 ವಿದ್ಯಾರ್ಥಿಗಳ ಪೈಕಿ 1,50,094 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
* ಉಡುಪಿ – ಪ್ರಥಮ ಸ್ಥಾನ (94%)
* ದಕ್ಷಿಣ ಕನ್ನಡ – ದ್ವೀತಿಯ ಸ್ಥಾನ(92.12%)
* ಶಿವಮೊಗ್ಗ- ತೃತೀಯ ಸ್ಥಾಮ (88.67%)
* ಚಿಕ್ಕಮಗಳೂರು ಹತ್ತನೇ ಸ್ಥಾನ (83.39%)
* ಯಾದಗಿರಿ – ಕೊನೇ ಸ್ಥಾನ – (ಶೇ.50.59)
ಇದನ್ನೂ ಓದಿ: ರಾಜ್ಯದ ರೈತರೇ ಗಮನಿಸಿ; ಬರಪರಿಹಾರದ ಹಣದ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ
SSLC ಫಲಿತಾಂಶವನ್ನು ಮೊಬೈಲ್ ನಲ್ಲಿ ನೋಡಲು ಇಲ್ಲಿದೆ ಟಿಪ್ಸ್:
* ಗೂಗಲ್ ಕ್ರೋಮ್ ಓಪನ್ ಮಾಡಿ.
* ನಂತರ ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಿ
* ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
* ಹೊಸ ಲಾಗಿನ್ ಪುಟವು ತೆರೆಯುತ್ತದೆ
* ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
* ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
ಮಧ್ಯಾಹ್ನದ ವೇಳೆಗೆ ಶಾಲೆಗಳಲ್ಲಿ ಫಲಿತಾಂಶ:
ಕರ್ನಾಟಕ ರಾಜ್ಯದ ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ವೇಳೆಗೆ ಶಾಲಾ ನೋಟಿಸ್ ಬೋರ್ಡ್ ನಲ್ಲಿ ವಿದ್ಯಾರ್ಥಿಗಳ ಫಲಿತಾಂಶವನ್ನು ಅಂಟಿಸಲಾಗುತ್ತದೆ.
ಇದನ್ನೂ ಓದಿ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಜಿಲ್ಲಾವಾರು ಫಲಿತಾಂಶದ ಪಟ್ಟಿ ಇಲ್ಲಿದೆ ನೋಡಿ:

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ






Leave a Reply