(SSLC Result) ನಾಳೆ (ಗುರುವಾರ) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ನಂತರ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಇದನ್ನೂ ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024 ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಇದನ್ನೂ ಓದಿ: ಇದೀಗ ಮೂಡುಬಿದಿರೆಯಲ್ಲೂ ಕ್ರಿಯೇಟಿವ್ ನ ಪುಸ್ತಕ ಮನೆ; ಕನ್ನಡ ಪುಸ್ತಕ ಲೋಕದಲ್ಲಿ ಮತ್ತೊಂದು ಮೈಲುಗಲ್ಲು
ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರಿದ್ದರು. ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ
ರಿಸಲ್ಟ್ ಅನ್ನು ಹೀಗೆ ಚೆಕ್ ಮಾಡಿ:
* ಕೆ.ಎಸ್.ಇ.ಎ.ಬಿ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ
* ಮುಖಪುಟದಲ್ಲಿ ಕಾಣುವ SSLC ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಲಾಗಿನ್ ಪುಟದಲ್ಲಿ ಕೇಳಲಾದ ಪರೀಕ್ಷಾ ನೋಂದಣಿ ಸಂಖ್ಯೆ ಹಾಗೂ ಹೆಸರು ಕೇಳಲಾದ ಮಾಹಿತಿಯನ್ನು ನಮೂದಿಸಿ
* ಹೊಸ ಪುಟದಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ
* ಫಲಿತಾಂಶ ಪುಟ ಡೌನ್ ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply