SSP2: (State Scholarship Portal) ಕರ್ನಾಟಕ ಸರ್ಕಾರದ ಒಂದು ಉಪಕ್ರಮವಾಗಿದ್ದು ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ವಿದ್ಯಾರ್ಥಿವೇತನ ನೀಡುತ್ತದೆ. 2025-26ನೇ ಸಾಲಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ssp.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು. ಆಧಾರದ ಆಧಾರಿತ ಬ್ಯಾಂಕ್ ಖಾತೆಜಾತಿ ಮತ್ತು ಆದಾಯ ಪ್ರಮಾಣಪತ್ರ ಅಗತ್ಯವಿದೆ.
ಇದನ್ನೂ ಓದಿ: 10th ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 12,000 ದಿಂದ ಸಂಬಳ
ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಬೆಳಕು. ಆದರೆ ಆರ್ಥಿಕ ಸಂಕಷ್ಟಗಳು ಹಲವು ಬಾರಿ ಈ ಬೆಳಕನ್ನು ಮಸುಕಾಗಿಸುತ್ತವೆ. ಇಂತಹ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ(SSP Scholarship Application) ಬೆನ್ನೆಲುಬಾಗಿ ನಿಲ್ಲುವುದು ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳು.
ದಿನಾಂಕ ವಿಸ್ತರಣೆ:
ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಇದೀಗ 15 ಮಾರ್ಚ್ 2026 ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ವಿದ್ಯಾರ್ಥಿಗಳು ಆನ್‌ಲೈನ್(SSP Scholarship Last Date) ಮೂಲಕ ಅಧಿಕೃತ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಅರ್ಹತೆಗಳು:
* ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಸರ್ಕಾರಿ ಅಥವಾ ಅನುದಾನಿತ ಶಾಲೆ ಅಥವಾ ಕಾಲೇಜಿನಲ್ಲಿ ಓದುತ್ತಿರಬೇಕು.
* ಸರ್ಕಾರಿ ನಿಗದಿ ಪಡಿಸಿದ ಕುಟುಂಬದ ವಾರ್ಷಿಕ ಆದಾಯ ಮೀರಬಾರದು.
ಇದನ್ನೂ ಓದಿ: 6 ತಿಂಗಳು ಇಂತಹವರ ರೇಷನ್ ಕಾರ್ಡ್ ಕ್ಯಾನ್ಸಲ್; ಕಾರಣವೇನು ಗೊತ್ತಾ…?
ದಾಖಲೆಗಳು:
* ಆಧಾರ್ ಕಾರ್ಡ್(Aadhaar card)
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste and Income Certificate)
* ಶೈಕ್ಷಣಿಕ ದಾಖಲೆಗಳು(Academic records)
* ಶುಲ್ಕದ ರಸೀದಿ(Receipt of fees)
* ಬ್ಯಾಂಕ್ ಪಾಸ್ ಬುಕ್(Bank pass book)
* ವಿದ್ಯಾರ್ಥಿಯ ಐಡಿ(SATS ID)
ಹೆಚ್ಚಿನ ಮಾಹಿತಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವೆಬ್‌ಸೈಟ್ ಸಂಪರ್ಕಿಸಿ. Social welfare office ಮೂಲಕವೂ ಅಪಡೇಟ್ ಪಡೆಯಬಹುದು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (SSP2:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





