Staff Transfers: ಸಿಬ್ಬಂದಿ ವರ್ಗಾವಣೆಗೆ ಬ್ರೇಕ್

*(Staff Transfers:) ಬೆಂಗಳೂರು: ದೇಶಾದ್ಯಂತ 2027ರ ಜನಗಣತಿ ಕಾರ್ಯಕ್ಕೆ ಪೂರ್ವಸಿದ್ಧತೆಗಳು ಆರಂಭವಾಗಿರುವ ಹಿನ್ನೆಲೆ, ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು 2027ರ ಮಾರ್ಚ್ 31ರವರೆಗೆ ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಈ ಕುರಿತು ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಸರ್ಕಾರದ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿದ್ದಾರೆ.

ಕೇಂದ್ರ ಗೃಹ ಮಂತ್ರಾಲಯದ ನಿರ್ದೇಶನದಂತೆ, 1948ರ ಜನಗಣತಿ ಕಾಯ್ದೆ ಹಾಗೂ 1990ರ ಜನಗಣತಿ ನಿಯಮಗಳ ಅಡಿಯಲ್ಲಿ 2027ರ ಜನಗಣತಿ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೊದಲ ಹಂತವಾಗಿ ಮನೆಗಳ ಪಟ್ಟಿ ಮತ್ತು ಮನೆ ಗಣತಿ (HLO) ಕಾರ್ಯ 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ 30 ದಿನಗಳ ಕಾಲ ನಡೆಯಲಿದೆ. ಈ ಅವಧಿಯಲ್ಲಿ ಸ್ವಯಂ ನೋಂದಣಿ ಮತ್ತು ಮನೆ ಗಣತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

ಇನ್ನೊಂದು ಹಂತವಾಗಿ 2027ರ ಫೆಬ್ರವರಿಯಲ್ಲಿ ಜನಸಂಖ್ಯೆ ಗಣತಿ (PE) ಪ್ರಕ್ರಿಯೆ ನಡೆಯಲಿದ್ದು, ದೇಶದಾದ್ಯಂತ ಅಧಿಕೃತ ಗಣತಿ ಕಾರ್ಯ ನಡೆಸಲಾಗುತ್ತದೆ.

ಜನಗಣತಿಯಂತಹ ಮಹತ್ವದ ಮತ್ತು ಶಾಸನಬದ್ಧ ಕಾರ್ಯಗಳನ್ನು ಸುಗಮವಾಗಿ ನಡೆಸಲು ಈಗಾಗಲೇ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಬ್ಲಾಕ್ ಹಂತದ ಅಧಿಕಾರಿಗಳನ್ನು ನೇಮಕ ಮಾಡಿ ತರಬೇತಿ ನೀಡಲಾಗಿದೆ. ಈ ನಡುವೆ ಸಿಬ್ಬಂದಿ ವರ್ಗಾವಣೆಯಾದರೆ ಜನಗಣತಿ ಕಾರ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ, ಕೇಂದ್ರ ಗೃಹ ಮಂತ್ರಾಲಯದ ಸೂಚನೆಯಂತೆ ವರ್ಗಾವಣೆಗಳಿಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಇದೇ ವೇಳೆ, ಜನಗಣತಿ ಕಾರ್ಯಕ್ಕೆ ಈಗಾಗಲೇ ನಿಯೋಜನೆಗೊಂಡು ತರಬೇತಿ ಪಡೆದಿರುವ ಅಧಿಕಾರಿಗಳ ಇಲಾಖಾವಾರು ಮಾಹಿತಿಯನ್ನು ಸರ್ಕಾರ ಒದಗಿಸಿರುವ ‘ಗೂಗಲ್ ಸ್ಪ್ರೆಡ್‌ಶೀಟ್’ ಲಿಂಕ್‌ನಲ್ಲಿ ಮೂರು ದಿನಗಳ ಒಳಗಾಗಿ ಅಪ್‌ಲೋಡ್ ಮಾಡುವಂತೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹಮೂರ್ತಿ ಜಿ.ಕೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Staff Transfers: ಸಿಬ್ಬಂದಿ ವರ್ಗಾವಣೆಗೆ ಬ್ರೇಕ್
Staff Transfers: ಸಿಬ್ಬಂದಿ ವರ್ಗಾವಣೆಗೆ ಬ್ರೇಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Staff Transfers:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?