ಹೊಸ ರೇಷನ್ ಕಾರ್ಡ್ (New Ration Card Apply) ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆಯಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಕಳೆದ ಅನೇಕ ತಿಂಗಳುಗಳಿಂದ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಿಲ್ಲ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಪಡಿತರ ಚೀಟಿ ಬಹಳ ಮುಖ್ಯದ್ದಾಗಿದೆ.
ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕು ಅಂದುಕೊಂಡವರಿಗೆ ಹಲವಾರು ಮಾಹಿತಿಗಳ ಕೊರತೆ ಇರುತ್ತದೆ.. ಹಾಗಾದ್ರೆ ಇದಕ್ಕೆ ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ.
ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
ವಿಧಾನಸಭೆ, ಲೋಕಸಭೆ ಚುನಾವಣೆ ಸೇರಿದಂತೆ ಹಲವು ಕಾರಣಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಅಲ್ಲದೆ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಇದೀಗ ಮುಂದಿನ ವಾರದಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲು ತೆರೆಯಲಾಗುವುದು. ಬಿಪಿಎಲ್ ಕಾರ್ಡ್ ಗಾಗಿ ಚುನಾವಣೆಗಿಂತ ಮೊದಲು 2.94 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳ ಪರಿಶೀಲನೆ ನಡೆಸಲಾಗುತ್ತಿದೆ. ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಪಂ ಕಚೇರಿಗಳಲ್ಲಿ ಲಭ್ಯವಿರುವ ಗಣಕೀಕರಣ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬೇಕು.
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು..?
* ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಬೇಕು.
* 6 ವರ್ಷದ ಒಳಗಿನ ಮಕ್ಕಳನ್ನು ಹೊರತುಪಡಿಸಿ ಕುಟುಂಬದ ಎಲ್ಲಾ ಸದಸ್ಯರ ಬಯೋಮೆಟ್ರಿಕ್ ಖಡ್ಡಾಯ.
* ಕುಟುಂಬದ ಸದಸ್ಯರೊಬ್ಬರ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ ಬೇಕು.
* ಕುಟುಂಬದ ಒಬ್ಬ ಸದಸ್ಯರ ಹೆಸರಿನಲ್ಲಿ ಆದಾಯ ಪ್ರಮಾಣ ಪತ್ರ ಬೇಕು
* ಮನೆಯಲ್ಲಿ ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದಲ್ಲಿ ಅವರ ಜನನ ಪ್ರಮಾಣ ಪತ್ರ ಬೇಕು.
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ (Adhar Card) ಅಥವಾ ಮತದಾರರ ಗುರುತಿನ ಪತ್ರ (Voter ID)

ಅರ್ಜಿ ಸಲ್ಲಿಸುವುದು ಹೇಗೆ..?
* ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.
* ಅಧಿಕೃತ ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು.
* ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
ಮಾನ ದಂಡಗಳು ಏನೇನು..?
* ಕರ್ನಾಟಕದಲ್ಲಿ ಖಾಯಂ ನಿವಾಸಿಯಾಗಿರಬೇಕು.
* ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿರದ ಕುಟುಂಬಗಳು ಅರ್ಹರಾಗಿರುತ್ತಾರೆ.
* ಹೊಸದಾಗಿ ಮದುವೆಯಾದ ದಂಪತಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.
* ದಿನಾಂಕ ಮುಗಿದ ತಾತ್ಕಾಲಿಕ ಪಡಿತರ ಚೀಟಿ ಹೊಂದಿರುವ ನಾಗರಿಕರು ಅರ್ಹರಾಗಿರುತ್ತಾರೆ.
* ಮನೆಯ ಆದಾಯ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಗಳನ್ನು ಆಧರಿಸಿ ರೇಷನ್ ಕಾರ್ಡ್ ನೀಡಲಾಗುತ್ತದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!





