Sunday, October 1, 2023
Homeಮಲೆನಾಡುವಿಳಾಸ ಕೇಳುವ ನೆಪದಲ್ಲಿ ಬಂಗಾರದ ಸರ ಕಿತ್ತುಕೊಂಡು ಹೋದ ಅಪರಿಚಿತರು

ವಿಳಾಸ ಕೇಳುವ ನೆಪದಲ್ಲಿ ಬಂಗಾರದ ಸರ ಕಿತ್ತುಕೊಂಡು ಹೋದ ಅಪರಿಚಿತರು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ವಿಳಾಸ ಕೇಳುವ ನೆಪದಲ್ಲಿ ಬಂದು ಕುತ್ತಿಗೆಯಲ್ಲಿದ್ದ ಬಂಗಾರಸರವನ್ನ ಕಿತ್ತುಕೊಂಡು ಹೋಗಿರುವ ಘಟನೆ ಶಿವಮೊಗ್ಗ ನಗರದ ಅಶೋಕ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ; ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಇದನ್ನೂ ಓದಿ; ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ

ಅಶೋಕ ರಸ್ತೆಯಲ್ಲಿ ಮನೆಗೆಲಸ ಮುಗಿಸಿಕೊಂಡು ನಡೆದುಕೊಂಡು ಹೋಗುತ್ತಿರುವಾಗ ಹಿಂಬಾಲಿಸಿಕೊಂಡು ಬಂದ ಇಬ್ಬರು ಬೈಕ್ ಸವಾರರು ಹಿಂದಿ ಭಾಷೆಯಲ್ಲಿ ವಿಳಾಸ ಕೇಳಿದ್ದಾರೆ.

ಈ ವಿಳಾಸಗೊತ್ತಿಲ್ಲವೆಂದು ಹೇಳಿ ಮುಂದು ಹೋಗುತ್ತಿದ್ದಂತೆ ಕುತ್ತಿಗೆಗೆ ಕೈಹಾಕಿ ಬಂಗಾರದ ಸರವನ್ನ ಕಿತ್ತುಕೊಂಡಿದ್ದಾರೆ. ತಕ್ಷಣವೇ ಮಹಿಳೆ ಸರವನ್ನ ಹಿಡಿಕೊಂಡಿದ್ದು 15 ಗ್ರಾಂ ಸರದಲ್ಲಿ 6 ಗ್ರಾಂ ಸರ ಅಪರಿಚಿತನ ಕೈ ಸೇರಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಚುನಾವಣಾ ಸಮಯದಲ್ಲಿ ಶೃಂಗೇರಿ ಕ್ಷೇತ್ರ ಬಿಜೆಪಿಗೆ ಮತ್ತೊಂದು ಆಘಾತ

ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆ

ಪೊಲೀಸರ ಭರ್ಜರಿ ಕಾರ್ಯಾಚರಣೆ


ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಬಾವಿಗೆ ಹಾರಿ ರೈತ ಅತ್ಮಹತ್ಯೆ

ಚುನಾವಣಾ ಮೆರವಣಿಗೆಗೆ ಮಕ್ಕಳ ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ

ದಿನಾಂಕ 18 ಏಪ್ರಿಲ್ 2023ರಂದು ಕೊಡಗಿನ ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡ ಕುರಿತು ಗಂಭೀರ ಆರೋಪ ಕೇಳಿಬಂದಿದ್ದು ಈ ಘಟನೆ ಸಂಬಂಧ ಚುನಾವಣೆ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ;  ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು

ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಸಾವಿರಾರು ಸಂಖ್ಯೆ ಜನರೊಂದಿಗೆ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ರ್ಯಾಲಿ ನಡೆಸಿದ್ದರು.

ಈ ಸಂದರ್ಭದಲ್ಲಿ ನೂರಾರು ಮಕ್ಕಳು ಕಾಂಗ್ರೆಸ್ ಶಾಲು, ಟೋಪಿ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು

ಚುನಾವಣಾ ಆಯೋಗ ಈಗಾಗಲೇ 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದ್ಧು ಈ ಬೆಳವಣಿಗೆ ಸಂಬಂಧ ಚುನಾವಣೆ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ

ಹಣ ನೀಡಿ ಜನರನ್ನು ಕರೆತಂದರು:

ಇನ್ನು ಹಣ ನೀಡಿ ಮೆರವಣಿಗೆಗೆ ಜನರನ್ನು ಕರೆದುಕೊಂಡು ಬಂದಿರುವುದು ಹಾಗೂ ಹೊರ ಊರುಗಳಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಸಾಕಷ್ಟು ವೈರಲ್ ಆಗಿದೆ.

Most Popular

Recent Comments