ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ,ಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆಯನ್ನು ನಡೆಸಿದರು.
ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಓರ್ವನನ್ನು ಮಾತ್ರ ಬಂಧಿಸಿಲಾಗಿದೆ ಆದರೆ ಈ ಪ್ರಕರಣದಲ್ಲಿ ಅನೇಕ ವ್ಯಕ್ತಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಪ್ರಕರಣಕ್ಕೆ ವಿಶೇಷ ರೀತಿಯಲ್ಲಿ ಒತ್ತು ನೀಡಿ ಉನ್ನತ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.
ನಂತರ ಮಣಿಪಾಲದಲ್ಲಿ ಸರ್ಕಾರದ ನಿಯಮ ಮೀರಿ ಪಬ್‌ಗಳು ಕಾರ್ಯಾಚರಿಸುತ್ತಿವೆ. ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮವನ್ನು ಕೈಗೊಂಡಿಲ್ಲ. ಕೂಡಲೇ ನಿಗಧಿತ ಅವಧಿಯನ್ನು ಮೀರಿ ಕಾರ್ಯ ನಿರ್ವಹಿಸುವ ಪಬ್‌ಗಳನ್ನು ಮುಚ್ಚಿಸಬೇಕು. ಪಬ್‌ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣವನ್ನು ಹಾಕಬೇಕು ಎಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿಯನ್ನು ಸಲ್ಲಿಸಿದರು.
ಎಬಿವಿಪಿ ಮುಖಂಡರಾದ ಸುಮುಖ್, ಬಸವೇಶ್ ಕೋರಿ, ಆಶಿಶ್ ಶೆಟ್ಟಿ, ಮಂಜುನಾಥ್, ಶ್ರೀ ಶೆಟ್ಟಿ , ಗಾನವಿ ಮುಂತಾದವರು ಇದ್ದರು ಪ್ರತಿಭಟನೆಯಲ್ಲಿ ಭಾಗವಹಿಸಿದರು