Students: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ

(Students:) 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿಸೆಂಬರ್ 20 ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?;
ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ಇ-ಮೇಲ್ ವಿಳಾಸ: bcwdhelpline@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Students: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ
Students: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ

ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್‌ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು