Subrahmanya Dhareshwara: ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

(Subrahmanya Dhareshwara) ಕಂಚಿನಕಂಠದ-ಪ್ರಯೋಗಶೀಲ ಹಾಡುಗಾರರಾಗಿದ್ದ ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನರಾಗಿದ್ದಾರೆ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್


ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷ ಸೇವೆ ಸಲ್ಲಿಸಿರುವ ಸುಬ್ರಹ್ಮಣ್ಯ ಧಾರೇಶ್ವರ, ಕೋಟ ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳ, ಪೆರ್ಡೂರು ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ್ದರು. ಮೇಳದ ಎಲೆಕ್ಟ್ರೀಷಿಯನ್ ಆಗಿ ಸೇರಿ ಬಳಿಕ ಭಾಗವತರಾದರು. ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಮಗನ ಮನೆಯಲ್ಲಿ ನಿಧನ ಹೊಂದಿದ್ದಾರೆ.

Subrahmanya Dhareshwara: ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ಪೌರಾಣಿಕ ಯಕ್ಷಗಾನ ಭಾಗವತರಾಗಿದ್ದ ದಿವಂಗತ ನಾರ್ಣಪ್ಪ ಉಪ್ಪೂರ ಅವರ ಶಿಷ್ಯರಾಗಿದ್ದ ಧಾರೇಶ್ವರ ಅವರು ತಮ್ಮ 21 ನೇ ವಯಸ್ಸಿನಲ್ಲಿ ವೃತ್ತಿಪರ ಗಾಯಕರಾಗಿ ಯಕ್ಷಗಾನ ರಂಗಭೂಮಿಗೆ ಪ್ರವೇಶಿಸಿದರು. ಉತ್ತರ ಕನ್ನಡದ ಗೋಕರ್ಣದ ಬಳಿಯ ಧಾರೇಶ್ವರದಲ್ಲಿ ಅವರ ತಂದೆ ಲಕ್ಷ್ಮೀನಾರಾಯಣ ಭಟ್ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದರು. ಹಾಗಾಗಿ ಮಗನಿಗೆ ಚಿಕ್ಕವಯಸ್ಸಿನಲ್ಲೇ ಯಕ್ಷಗಾನದ ಅಭಿರುಚಿ ಬೆಳೆಯಿತು.


ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್


ಸುಬ್ರಹ್ಮಣ್ಯ ಧಾರೇಶ್ವರ ಅವರು ಸುಮಾರು ನಾಲ್ಕು ದಶಕಗಳ ಕಾಲ ವೃತ್ತಿಪರ ‘ಭಾಗವತ’ರಾಗಿದ್ದರು. ಪೆರ್ಡೂರು ಯಕ್ಷಗಾನ ಮೇಳದಿಂದ ‘ಪ್ರಧಾನ ಭಾಗವತ’ರಾಗಿ ಬಳಿಕ ಇತ್ತೀಚೆಗೆ ನಿವೃತ್ತರಾಗಿದ್ದರು. ನಂತರ ಅವರು ವಿವಿಧ ಯಕ್ಷಗಾನ ಪ್ರದರ್ಶನಗಳಲ್ಲಿ ಹಾಡುತ್ತಿದ್ದರು. ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Subrahmanya Dhareshwara: ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ
Subrahmanya Dhareshwara: ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ