Subsidy Students: 1-10th ವಿದ್ಯಾರ್ಥಿಗಳಿಗೆ ಸರ್ಕಾರದಿಂದ 50,000!

Subsidy Students: ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ (1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಮಕ್ಕಳಿಗೆ ಮಾತ್ರ) ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸಂಬಂಧಿಸಿದ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ (ಸ್ನಾತಕೋತ್ತರ ಪದವಿ ಒಳಗೊಂಡಂತೆ) ಉನ್ನತ ವ್ಯಾಸಂಗಕ್ಕೆ ಶಿಕ್ಷಕರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಮಾತ್ರ ಅಂತಹ ಶಿಕ್ಷಕರ ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಕೆ ಆರಂಭಿಸಿದೆ.


ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು? 


ಈ ಧನಸಹಾಯ ಪಡೆಯಲು ಅರ್ಜಿ ಸಲ್ಲಿಸಲು ಇರುವ ಷರತ್ತುಗಳೇನು?

1. ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ/ಉಪನ್ಯಾಸಕರ/ಪ್ರಾದ್ಯಾಪಕರ/ಪ್ರಾಚಾರ್ಯರ/ಮಕ್ಕಳಿಗೆ ಮಾತ್ರ ಧನಸಹಾಯ ನೀಡಲಾಗುವುದು. ಶಾಲಾ ಶಿಕ್ಷಕರು/ಉಪನ್ಯಾಸಕರಾಗಿದ್ದಲ್ಲಿ, HRMS ಪ್ರತಿ ಅಥವಾ ನೇಮಕಾತಿ ಅನುಮೋದನೆ ಪ್ರತಿಯನ್ನು ಸಂಬಂಧಿಸಿದ ಶಾಲಾ ಕಾಲೇಜು ಮುಖ್ಯಸ್ಥರಿಂದ ದೃಢೀಕರಿಸಿ ಸಲ್ಲಿಸುವುದು.
2. ವೃತ್ತಿಪರ ಶಿಕ್ಷಣದಲ್ಲಿ ಪ್ರತಿ ವರ್ಷ/ಪ್ರತಿ ಸೆಮಿಸ್ಟರ್‌ನಲ್ಲಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ.
3. ಅಂಕಪಟ್ಟಿಗಳನ್ನು ಸಂಬಂಧಿಸಿದ ಸಂಸ್ಥೆಗಳ ಮುಖ್ಯಸ್ಥರಿಂದ ದೃಢೀಕರಿಸಿ ಸಲ್ಲಿಸಬೇಕು.
4. ವಿದ್ಯಾರ್ಥಿಗಳ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಸಂಬಂಧಿಸಿದಂತೆ, ಭಾರತದ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಲು ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಧನಸಹಾಯಕ್ಕೆ ಅರ್ಹರೆಂದು ಪರಿಗಣಿಸಲಾಗುವುದು.
5. ಬ್ಯಾಂಕ್‌ಗಳಲ್ಲಿ ಎಷ್ಟೇ ಮೊತ್ತದ ಶೈಕ್ಷಣಿಕ ಸಾಲ ಪಡೆದಿದ್ದರೂ ನಿಧಿಗಳ ಕಛೇರಿಯಿಂದ ಬ್ಯಾಂಕ್ ಬಡ್ಡಿ ಹಣಕ್ಕೆ ಮಾತ್ರ ಗರಿಷ್ಠ ರೂ. 50,000/-ಗಳ ಧನಸಹಾಯವನ್ನು ಒಂದು ಬಾರಿಗೆ ಮಾತ್ರ ನೀಡಲಾಗುವುದು.
6. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿರತಕ್ಕದ್ದು, (ವ್ಯಾಸಂಗ ಮಾಡಿರುವ ಬಗ್ಗೆ ಪ್ರಮಾಣ ಪತ್ರವನ್ನು ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿ ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿ ಪಡೆದು ಸಲ್ಲಿಸುವುದು).
7. ವಿದ್ಯಾರ್ಥಿಗಳು ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 01 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ದೃಢೀಕರಣವನ್ನು ಸುತ್ತೋಲೆಯೊಂದಿಗೆ ಲಗತ್ತಿಸಿರುವ ನಮೂನೆಯಲ್ಲಿ ನೀಡುವುದು.
8. ವಿದ್ಯಾರ್ಥಿಯು ಸಂಬಂಧಿಸಿದ ಕೋರ್ಸ್‌ಗೆ ಸೇರ್ಪಡೆಯಾದ ನಂತರ ಧನಸಹಾಯಕ್ಕಾಗಿ ನಿಧಿಗಳ ಕಛೇರಿಗೆ ನಿಗಧಿತ ನಮೂನೆಯಲ್ಲಿ ಶಿಕ್ಷಕ/ವಿದ್ಯಾರ್ಥಿ ಮಾಹಿತಿ, ಶುಲ್ಕ ಪಾವತಿಸಿದ ರಸೀದಿ, ವ್ಯಾಸಂಗ ಮಾಡುತ್ತಿರುವ ಕೋರ್ಸ್‌ನ ವಿವರ, ಸಾಲ ಪಡೆದ ಬ್ಯಾಂಕಿನ ಖಾತೆ ಸಂಖ್ಯೆ ವಿವರ ಹಾಗೂ ಶೈಕ್ಷಣಿಕ ಸಾಲದ ಬಡ್ಡಿಯ ವಿವರಗಳು ಹಾಗೂ ಮುಂಗಡವಾಗಿ ಬ್ಯಾಂಕ್‌ಗೆ ಪಾವತಿಸಿದ ಮೊತ್ತದ ವಿವರಗಳೊಂದಿಗೆ ಸಂಬಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರ ದೃಢೀಕರಣದೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸುವುದು.
9. ಒಂದು ಕುಟುಂಬಕ್ಕೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಧನಸಹಾಯ ನೀಡಲಾಗುವುದು. ತಂದೆ/ತಾಯಿ ಇಬ್ಬರೂ ಶಿಕ್ಷಕರು/ ಉಪನ್ಯಾಸಕರಾಗಿದ್ದಲ್ಲಿ ಕುಟುಂಬಕ್ಕೆ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
10. ಮಂಜೂರಾದ ಧನಸಹಾಯದ ಮೊತ್ತವನ್ನು ಶೈಕ್ಷಣಿಕ ಸಾಲ ಪಡೆದ ಬ್ಯಾಂಕ್‌ಗಳಿಗೆ ನೇರವಾಗಿ ಸಾಲ ಪಡೆದವರ ಖಾತೆಗೆ ವರ್ಗಾಯಿಸಲಾಗುವುದು.
11. 2023-2024ನೇ ಸಾಲಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಧನಸಹಾಯವನ್ನು ಪಡೆಯಲು ಅರ್ಹರಿರುತ್ತಾರೆ. ಕೋರ್ಸ್‌ನ ಎಲ್ಲಾ ವರ್ಷಗಳಲ್ಲಿ/ಸೆಮಿಸ್ಟರ್‌ಗಳಲ್ಲಿ ಉತ್ತೀರ್ಣ ಹೊಂದಿರವ ಎಲ್ಲಾ ಅಂಕಪಟ್ಟಿಗಳನ್ನು ಸಂಬಂಧಿಸಿದ ಸಂಸ್ಥೆಗಳ ಮುಖ್ಯಸ್ಥರಿಂದ ದೃಢೀಕರಿಸಿ ಅರ್ಜಿ ಸಲ್ಲಿಸುವುದು.


ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!


Subsidy Students: 1-10th ವಿದ್ಯಾರ್ಥಿಗಳಿಗೆ ಸರ್ಕಾರದಿಂದ 50,000!
Subsidy Students: 1-10th ವಿದ್ಯಾರ್ಥಿಗಳಿಗೆ ಸರ್ಕಾರದಿಂದ 50,000!

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
20-01-2025.


ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಮುಖ್ಯ ಮಾಹಿತಿ ವಾಟ್ಸಪ್ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
05-02-2025.


ಇದನ್ನೂ ಓದಿ: 1750 ಸ್ಕಾಲರ್ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ ಯಾರು ಅರ್ಹರು, ಏನೆಲ್ಲಾ ದಾಖಲೆಗಳು ಬೇಕು?


ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ವಿದ್ಯಾರ್ಥಿಗಳು www.schooleducation.karnataka.gov.inಈ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Subsidy Students: 1-10th ವಿದ್ಯಾರ್ಥಿಗಳಿಗೆ ಸರ್ಕಾರದಿಂದ 50,000!
Subsidy Students: 1-10th ವಿದ್ಯಾರ್ಥಿಗಳಿಗೆ ಸರ್ಕಾರದಿಂದ 50,000!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ