(Supreme Court:) ಕರ್ನಾಟಕ ಸರ್ಕಾರಿ ನೌಕರರೇ ಕೇಡರ್ ವರ್ಗಾವಣೆ ಮಾಡಿಸಿಕೊಂಡ್ರೆ ಹೊಡೆತ ಗ್ಯಾರೆಂಟಿ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್
ಹೌದು, ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ನಿರ್ದಿಷ್ಟ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನನ್ನು ಬೇರೆ ಇಲಾಖೆ ಅಥವಾ ಕೇಡರ್ಗೆ ವರ್ಗಾವಣೆ ಮಾಡಿದರೆ, ಆತ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಯ ಹಿರಿತನ ಸೇರಿದಂತೆ ಅಸ್ತಿತ್ವದಲ್ಲಿರುವ ಸ್ಥಾನಮಾನವನ್ನು ಹೊಂದಿರಲು ಅರ್ಹನಾಗಿರುತ್ತಾನೆ. ಆದಾಗ್ಯೂ, ಒಬ್ಬ ಅಧಿಕಾರಿಯನ್ನು ಆತನ ಸ್ವಂತ ಕೋರಿಕೆಯ ಮೇರೆಗೆ ವರ್ಗಾವಣೆ ಮಾಡಿದರೆ, ಆಗ ಆತ ವರ್ಗಾವಣೆಗೊಂಡ ಇಲಾಖೆಯ ಇತರ ಉದ್ಯೋಗಿಗಳ ಹಕ್ಕುಗಳು ಮತ್ತು ಸ್ಥಿತಿಗತಿಗಳನ್ನು ಗಮನಿಸಿ ಹಿರಿತನ ಪರಿಗಣಿಸಬೇಕಾಗುತ್ತದೆ. ಏಕೆಂದರೆ, ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಇದ್ದರೆ ಆಗ ಹಿಂದಿನ ಹುದ್ದೆಯ ಹಿರಿತನ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಆದೇಶದಿಂದ ಅನೇಕ ಸರ್ಕಾರಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.
ಇದನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ
ಕರ್ನಾಟಕದ ಪ್ರಕರಣದಲ್ಲಿ ಸುಪ್ರೀಂ ತೀರ್ಪು:(Supreme Court:)
ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮಹತ್ವದ ಆದೇಶ ನೀಡಿದೆ. ಸರ್ಕಾರಿ ಸ್ಟಾಫ್ ನರ್ಸ್ ಒಬ್ಬರು 1985 ರಲ್ಲಿ ಆರೋಗ್ಯ ಸಮಸ್ಯೆಗಳ ಕಾರಣ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಆಗಿ ಕೇಡರ್ ಬದಲಾವಣೆಯನ್ನು ಕೋರಿದ್ದರು. ವೈದ್ಯಕೀಯ ಮಂಡಳಿಯು ಅವರ ಅಸಮರ್ಥತೆಯನ್ನು ದೃಢಪಡಿಸಿದ್ದರಿಂದ ಕರ್ನಾಟಕ ಸರ್ಕಾರ 1989ರಲ್ಲಿ ಅವರನ್ನು ಬೇರೊಂದು ಕೇಡರ್ ಗೆ ವರ್ಗಾವಣೆ ಮಾಡಿ ಅನುಮೋದನೆ ನೀಡಿತ್ತು. ಆದರೆ, ಅವರ ಸೇವಾ ಹಿರಿತನವನ್ನು 1979 ರ ಬದಲಿಗೆ 1989 ರಿಂದ ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅವರು 2007ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಅವರ ಪರವಾಗಿ ತೀರ್ಪು ಬಂದಿತ್ತು. ಕರ್ನಾಟಕ ರಾಜ್ಯ ಹಾಗೂ ಕೆ. ಸೀತಾರಾಮುಲು (2010) ಪ್ರಕರಣದ ತೀರ್ಪನ್ನು ಉಲ್ಲೇಖಿಸಿ, ವೈದ್ಯಕೀಯ ಕಾರಣ ಆಧಾರಿತ ವರ್ಗಾವಣೆಗಳನ್ನು ಸಾರ್ವಜನಿಕ ಹಿತಾಸಕ್ತಿ ವರ್ಗಾವಣೆಗಳೆಂದು ಪರಿಗಣಿಸಿ, ಮೂಲ ಸೇವಾ ಹಿರಿತನವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಹೈಕೋರ್ಟ್ ತೀರ್ಪಿನಿಂದ ಅಸಮಾಧಾನಗೊಂಡ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court:) ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ನ್ಯಾಯಮೂರ್ತಿ ನರಸಿಂಹ, ಪ್ರತಿವಾದಿಯು ಸ್ವಯಂಪ್ರೇರಣೆಯಿಂದ ವರ್ಗಾವಣೆಯನ್ನು ಕೋರಿದ್ದರು ಮತ್ತು ಹೊಸ ಕೇಡರ್ ನ ಕೆಳಭಾಗದಲ್ಲಿ ಕಾರ್ಯನಿರ್ವಹಿಸಲು ಒಪ್ಪಿಗೆ ನೀಡಿದ್ದರು. ಹೀಗಾಗಿ ಅವರು ತಮ್ಮ ಆರಂಭಿಕ ನೇಮಕಾತಿ ದಿನಾಂಕದಿಂದ ಹಿರಿತನವನ್ನು ಪಡೆಯಲು ಸಾಧ್ಯವಿಲ್ಲ. ಒಂದು ವೇಳೆ ಹಾಗೆ ಮಾಡಿದರೆ ಹೊಸ ಕೇಡರ್ ನಲ್ಲಿ ಮೊದಲಿನಿಂದಲೇ ಇರುವ ಉದ್ಯೋಗಿಗಳಿಗೆ ಅನ್ಯಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ!; ಸರ್ಕಾರದಿಂದ ಮಹತ್ವದ ನಿರ್ಧಾರ

ಇತ್ತೀಚಿನ ಜನಪ್ರಿಯ ಸುದ್ದಿಗಳು (Supreme Court:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





