Sunday, October 1, 2023
Homeಮಲೆನಾಡುಚಿಕ್ಕಮಗಳೂರುಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್

ಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್

ಕೊಪ್ಪ/ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಲವು ಚಲನಚಿತ್ರ ಮತ್ತು ಸೀರಿಯಲ್‌ಗಳಲ್ಲಿ ನಟಿಸಿದ್ದ ಮಲೆನಾಡಿನ ಪ್ರತಿಭಾನ್ವಿತ ನಟ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಇದನ್ನೂ ಓದಿ; ದಂಪತಿಗಳ ಬಲಿ ಪಡೆದ ಜವರಾಯ, ಭೀಕರ ಅಪಘಾತದಲ್ಲಿ ಮಕ್ಕಳ ಸ್ಥಿತಿಯೂ ಗಂಭೀರ

ಇದನ್ನೂ ಓದಿ; ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸಿಗದಾಳು ಗ್ರಾಮದವರಾದ ಸಂಪತ್ ಕನ್ನಡದ ಹಲವು ಸಿನಿಮಾ ಮತ್ತು ಸೀರಿಯಲ್‌ಗಳಲ್ಲಿ ನಟಿಸಿದರು. 

ಅಗ್ನಿ ಸಾಕ್ಷಿ ದಾರಾವಾಹಿ ಸೇರಿದಂತೆ ಇತ್ತೀಚೆಗೆ ಬಿಡುಗಡೆಯಾಗಿದ್ದ ಕಂಬ್ಳಿಹುಳ, ಬಾಲಾಜಿ ಫೋಟೋ ಸೂಡಿಯೋ ಚಲನಚಿತ್ರಗಳಲ್ಲಿ ಸಹಜ ಅಭಿನಯದಿಂದ ಪಾತ್ರಗಳಿಗೆ ಜೀವ ತುಂಬಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಶನಿವಾರ ರಾತ್ರಿ ನೆಲಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ,

ಒಂದು ವರ್ಷದ ಹಿಂದೆಯಷ್ಟೇ ಸಂಪತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಇತ್ತೀಚೆಗೆ ಅವರಿಗೆ ಯಾವುದೇ ನಟನೆಯ ಅವಕಾಶಗಳು ಬಂದಿರಲಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು ಈ ಘಟನೆಯು ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇವರ ಅಕಾಲಿಕ ನಿಧನದಿಂದಾಗಿ ಅಭಿಮಾನಿಗಳು, ಚಿತ್ರರಂಗ ಕಂಬನಿ ಮಿಡಿಯುತ್ತಿದೆ

ಶೃಂಗೇರಿ ಕ್ಷೇತ್ರದಲ್ಲಿ ತಂದೆಯ ಪರ ಪ್ರಚಾರಕ್ಕಿಳಿದ ಅಭ್ಯರ್ಥಿಗಳ ಮಕ್ಕಳು

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಟಿ ಡಿ ರಾಜೇಗೌಡರವರ ಮೇಲಿರುವ ಅಭಿಮಾನ ಹಾಗು ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಶಾಸಕ ಟಿಡಿ ರಾಜೇಗೌಡರು ಪ್ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಶೃಂಗೇರಿ ಕ್ಷೇತ್ರಾದ್ಯಂತ ಯುವ ಸಮೂಹವು ನಮ್ಮ ಜನಪರ ಕಾಂಗ್ರೆಸ್ ನತ್ತ ಬರುತ್ತಿದ್ದು ಇದರಿಂದ ಹತಾಶೆಗೆ ಒಳಗಾದ ಬಿಜೆಪಿಯ ಜೀವರಾಜ್ ಬೆಂಬಲಿಗರು ಕೆಲವೆಡೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ರಾಜ್ ಕುಮಾರ್ ಹೆಗ್ಡೆ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದಾರೆ.

ಕ್ಷೇತ್ರದಲ್ಲಿ ಸಾವಿರಾರು ಜನ ಯುವಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಕೆಲ ದಿನಗಳ ಹಿಂದೆ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವಕರ ಗುಂಪು ಕಾಂಗ್ರೆಸ್ ಸೇರಿದ್ದು, ಯುವಕ ಸಂಪತ್ ಎಂಬುವರಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ಜಟಿಕೇಶ್ವರ ಹಾಗು ಗ್ರಾಮ ಪಂಚಾಯಿತಿ ಉದ್ಯೋಗಿ ದಿನೇಶ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಂಪತ್ ತಂದೆ ತಾಯಿಗೆ ಕೆಟ್ಟಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಇದರ ಬಗ್ಗೆ ಸಂಪತ್ ಆಡಿಯೋ ಇರುವ ಸಿಡಿಯೊಂದಿಗೆ ಶೃಂಗೇರಿ ಠಾಣೆಗೆ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಇನ್ನೂ ಕ್ರಮಕೈಗೊಂಡಿಲ್ಲ. ಪೊಲೀಸ್ ಇಲಾಖೆ ಕೂಡಲೇ ಅವರನ್ನು ಕರೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗು ದೂರು ಕೊಟ್ಟಿರುವ ಸಂಪತ್ ಮನೆಗೆ ರಕ್ಷಣೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಶೃಂಗೇರಿ ಕ್ಷೇತ್ರದಲ್ಲಿ ತಂದೆಯ ಪರ ಪ್ರಚಾರಕ್ಕಿಳಿದ ಅಭ್ಯರ್ಥಿಗಳ ಮಕ್ಕಳು

ಮಾಜಿ ಶಾಸಕ ಜೇವರಾಜ್ ರವರ ಬೆಂಬಲಿಗರು ಮಲೆನಾಡಿನಲ್ಲಿ ಈ ರೀತಿ ಕೊಲೆ ಬೆದರಿಕೆಗಳನ್ನು ಹಾಕಿ ಶೃಂಗೇರಿಯಲ್ಲಿ ಭಯದ ವಾತಾವರಣ ಸೃಷ್ಟಿಮಾಡಲು ಹೊರಟಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದಶಿ ಪ್ರದೀಪ್ ಕಲ್ಲೊಳ್ಳಿ ಮಾತನಾಡಿ ದಿನೇಶ್ ಎಂಬ ಸರ್ಕಾರೀ ಉದ್ಯೋಗಿ ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದು ಕಾನೂನು ಬಾಹಿರ. ಚುನಾವಣಾ ಅಧಿಕಾರಿಗಳು ಈ ಕೂಡಲೇ ಅವರನ್ನು ಅಮಾನತ್ತು ಮಾಡಬೇಕು ಹಾಗು ಇದೇ ಸರಕಾರಿ ಉದ್ಯೋಗಿ ಕೊಲೆ ಬೆದರಿಕೆ ಹಾಕಿರುವುದರಿಂದ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮದ್ಯ ಪ್ರವೇಶಿಸಿ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ;  ಚಿಕ್ಕಮಗಳೂರು ಜಿಲ್ಲೆಯಲ್ಲಿ ರಂಗೇರಿದ ಚುನಾವಣಾ ಕಾವು

ಕಾಂಗ್ರಸ್ ಯುವಘಟಕದ ನೂತನ್ ಕಲ್ಕುಳಿ ಮಾತನಾಡಿ ಬಿಜೆಪಿಯ ಭ್ರಷ್ಟಾಚಾರ ಹಾಗು ಹುಸಿ ದೇಶ ಭಕ್ತಿ ಇವುಗಳಿಂದ ಬೇಸತ್ತು ಸಿಡಿದೆದ್ದು ಹೊರಬಂದು ಕಾಂಗ್ರೆಸ್ ಸೇರುತ್ತಿರುವ ಯುವ ಸಮುದಾಯದೊಂದಿಗೆ ನಮ್ಮ ಇಡೀ ಕಾಂಗ್ರೆಸ್ ಕುಟುಂಬ ನಿಮ್ಮೊಂದಿಗೆ ಇರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಜ್ವಲ್ ಶೆಟ್ಟಿ ಹೊಳೆಕೊಪ್ಪ, ಅಭಿಲಾಷ್ ಹುಲ್ಗಾರ್ , ಮೇಧ ಮದನ್, ಮತ್ತಿತರು ಇದ್ದರು.

ಇದನ್ನೂ ಓದಿ; ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ

Most Popular

Recent Comments