(Tax benefits:) ಹೆಚ್ಚಿನ ಪೋಸ್ಟ್ ಆಫೀಸ್ ಸ್ಕೀಮ್ಗಳು ತೆರಿಗೆ ವಿನಾಯಿತಿ ನೀಡುತ್ತವಾದರೂ ಕೆಲ ಸ್ಕೀಮ್ಗಳಲ್ಲಿ ಈ ಅವಕಾಶ ಇರುವುದಿಲ್ಲ. ಪೋಸ್ಟ್ ಆಫೀಸ್ ಸ್ಕೀಮ್ಗಳಲ್ಲಿ ತೆರಿಗೆ ವಿನಾಯಿತಿ ಅವಕಾಶ ಇಲ್ಲದ ವಿವರ ಇಲ್ಲಿದೆ ನೋಡಿ.
ಇದನ್ನೂ ಓದಿ: ಹೊಲಿಗೆ ಯಂತ್ರ, ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ
ಪೋಸ್ಟ್ ಆಫೀಸ್ ಆವರ್ತನ ಠೇವಣಿ ಸ್ಕೀಮ್ (RD):
ಬಡ್ಡಿ ಆದಾಯ ₹50,000 ಮೀರಿದರೆ, ಅಂಚೆ ಕಚೇರಿಯು ನಿಮ್ಮ ಆರ್‌ಡಿ ಹೂಡಿಕೆಗಳ ಮೇಲಿನ ಬಡ್ಡಿ ಆದಾಯದಿಂದ ಮೂಲದಲ್ಲೇ ತೆರಿಗೆಯನ್ನು ಕಡಿತಗೊಳಿಸುತ್ತದೆ. ಮೊತ್ತವು ನಿಗದಿತ ಮಿತಿಗಿಂತ ಕಡಿಮೆಯಿದ್ದರೆ, ಅಂಚೆ ಕಚೇರಿಯಲ್ಲಿ ಠೇವಣಿ ಮಾಡಿದ ಆರ್‌ಡಿ ಮೊತ್ತದ ಮೇಲೆ ಯಾವುದೇ ತೆರಿಗೆಯನ್ನು ಕಡಿತಗೊಳಿಸಲಾಗುವುದಿಲ್ಲ.
ಮಹಿಳಾ ಸಮ್ಮಾನ್ ಸೇವಿಂಗ್ಸ್ ಸರ್ಟಿಫಿಕೇಟ್:
ಈ ಯೋಜನೆಯಡಿಯಲ್ಲಿ ಹೂಡಿಕೆದಾರರು ಎರಡು ವರ್ಷಗಳೊಳಗೆ ₹2 ಲಕ್ಷದವರೆಗೆ ಹೂಡಿಕೆ ಮಾಡಬಹುದು. ಹೂಡಿಕೆ ಮೊತ್ತದ ಮೇಲೆ 7.5% ಬಡ್ಡಿ ಸಿಗುತ್ತದೆ. ಆದರೆ, ಈ ಯೋಜನೆಯಲ್ಲಿ ತೆರಿಗೆ ವಿನಾಯಿತಿ ಇರುವುದಿಲ್ಲ. ಬಡ್ಡಿ ಆದಾಯ ಮಿತಿಗಿಂತ ಹೆಚ್ಚಿದರೆ ಟಿಡಿಎಸ್ ಕಡಿತಗೊಳಿಸಲಾಗುತ್ತದೆ.
ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ಜಾರಿ; ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ
ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS):
ಒಂದು ಹಣಕಾಸು ವರ್ಷದಲ್ಲಿ ₹1 ಲಕ್ಷಕ್ಕಿಂತ ಹೆಚ್ಚಿನ ಬಡ್ಡಿ ಗಳಿಸಿದರೆ TDS ಕಡಿತಗೊಳಿಸಲಾಗುತ್ತದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಅಡಿಯಲ್ಲಿ, ಹಣಕಾಸು ವರ್ಷದಲ್ಲಿ ₹1.5 ಲಕ್ಷದವರೆಗಿನ ಠೇವಣಿಗಳ ಮೇಲೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳು ಲಭ್ಯವಿದೆ.
ರಾಷ್ಟ್ರೀಯ ಉಳಿತಾಯ ಪತ್ರ (NSC):
ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಸ್ಕೀಮ್ನಲ್ಲಿ ಗಳಿಸಿದ ಬಡ್ಡಿಯು TDS ಗೆ ಒಳಪಡುವುದಿಲ್ಲ. ಒಂದು ಹಣಕಾಸು ವರ್ಷದಲ್ಲಿ NSC ಗಳಲ್ಲಿ ₹1.5 ಲಕ್ಷದವರೆಗಿನ ಠೇವಣಿಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳಿಗೆ ಅರ್ಹವಾಗಿವೆ.
ಇದನ್ನೂ ಓದಿ: ಈ ದಾಖಲೆಗಳಿದ್ರೆ ನಿಮ್ಮ ಮಕ್ಕಳಿಗೆ ಬ್ಲೂ ಆಧಾರ್ ಕಾರ್ಡ್ ಮಾಡಿಸಬಹುದು!
ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆ:
ಪೋಸ್ಟ್ ಆಫೀಸ್ ಮಂತ್ಲಿ ಇನ್ಕಮ್ ಸ್ಕೀಮ್ ಸಾಕಷ್ಟು ಜನಪ್ರಿಯವಾಗಿದೆ. ಇದು 5 ವರ್ಷಗಳಲ್ಲಿ ಮೆಚ್ಯೂರ್ ಆಗುತ್ತದೆ. ಆದರೆ, ಇದರಲ್ಲಿ ಟ್ಯಾಕ್ಸ್ ಬೆನಿಫಿಟ್ ಇರೋದಿಲ್ಲ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Tax benefits:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





