Teacher Promotion: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ

(Teacher Promotion:) ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರ ಪದೋನ್ನತಿ (ಬಡ್ತಿ) ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹೊಸ ನಿಯಮದ ಪ್ರಕಾರ, ಶಿಕ್ಷಕರು ಪದೋನ್ನತಿ ಪಡೆಯಲು ಕನಿಷ್ಠ 12 ವರ್ಷಗಳ ಸೇವಾವಧಿಯನ್ನು ಪೂರ್ಣಗೊಳಿಸಿರಬೇಕು ಎಂದು ಇಲಾಖೆ ಸ್ಪಷ್ಟಪಡಿಸಿದೆ.


ನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಹೊಸ ಮಾರ್ಗಸೂಚಿಯಲ್ಲಿ ಶಿಕ್ಷಕರ ಸೇವಾವಧಿ, ಹುದ್ದೆಗಳ ಹಂಚಿಕೆ ಹಾಗೂ ವಿದ್ಯಾರ್ಹತೆಗಳಿಗೆ ಸಂಬಂಧಿಸಿದ ಹಲವು ಪ್ರಮುಖ ಅಂಶಗಳನ್ನು ವಿವರಿಸಲಾಗಿದೆ. ಇದರ ಮೂಲಕ ಶಿಕ್ಷಣ ಇಲಾಖೆಯಲ್ಲಿ ಬಹುಕಾಲದಿಂದ ಬಾಕಿ ಇರುವ ಬಡ್ತಿ ಪ್ರಕ್ರಿಯೆಗಳಿಗೆ ಸ್ಪಷ್ಟತೆ ಬರಲಿದೆ ಎನ್ನಲಾಗುತ್ತಿದೆ.


ನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ


  • ಪ್ರಾಥಮಿಕ, ಪದವೀಧರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪದೋನ್ನತಿಗೆ ಅರ್ಹರಾಗಲು ಕನಿಷ್ಠ 12 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರಬೇಕು ಎಂದು ಸೂಚಿಸಲಾಗಿದೆ.
  • ಬಡ್ತಿ ನೀಡುವ ಸಂದರ್ಭದಲ್ಲಿ ಪ್ರತಿ ಮೂರು ಹುದ್ದೆಗಳ ಪೈಕಿ ಎರಡು ಹುದ್ದೆಗಳನ್ನು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮೀಸಲಿಡಲಾಗುತ್ತದೆ. ಉಳಿದ ಒಂದು ಹುದ್ದೆಯನ್ನು ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
  • 1 ರಿಂದ 5ನೇ ತರಗತಿಗಳನ್ನು ಬೋಧಿಸುವ ಶಿಕ್ಷಕರು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCTE) ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. 6 ಮತ್ತು 7ನೇ ತರಗತಿಗಳಿಗೆ ಬೋಧಿಸುವ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆದಿರಬೇಕು ಎಂಬುದು ಕಡ್ಡಾಯವಾಗಿದೆ.
  • ಯಾವುದೇ ವೃಂದದಲ್ಲಿ ಅರ್ಹ ಶಿಕ್ಷಕರು ಲಭ್ಯವಿಲ್ಲದಿದ್ದರೆ, ಇತರ ವೃಂದದ ಅರ್ಹ ಶಿಕ್ಷಕರನ್ನು ಜೇಷ್ಠತಾ ಪಟ್ಟಿಯ ಆಧಾರದ ಮೇಲೆ ಪದೋನ್ನತಿಗೆ ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜೊತೆಗೆ ಪ್ರೌಢಶಾಲಾ ಶಿಕ್ಷಕರನ್ನು ಗ್ರೇಡ್–2 ವೃಂದದ ಹುದ್ದೆಗೆ ಬಡ್ತಿ ನೀಡಲು ನಿರ್ಧರಿಸಲಾಗಿದೆ.
  • ಈ ಹೊಸ ನಿಯಮವು ಶಿಕ್ಷಣ ಇಲಾಖೆಯಲ್ಲಿ ಬಹುಕಾಲದಿಂದ ಬಾಕಿ ಇರುವ ಬಡ್ತಿ ಪ್ರಕ್ರಿಯೆಗಳಿಗೆ ಸ್ಪಷ್ಟ ಚೌಕಟ್ಟನ್ನು ನೀಡುವ ನಿರೀಕ್ಷೆಯಿದೆ ಎಂದು ಶಿಕ್ಷಣ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
Teacher Promotion: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ
Teacher Promotion: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ

ಇತ್ತೀಚಿನ ಜನಪ್ರಿಯ ಸುದ್ದಿಗಳು (Teacher Promotion:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ