Sunday, December 3, 2023
Homeಮಲೆನಾಡುಚಿಕ್ಕಮಗಳೂರುದೇವಸ್ಥಾನದ ಹುಂಡಿ ಒಡೆದು ಕಳ್ಳತನ: 6 ವರ್ಷ ಕಠಿಣ ಶಿಕ್ಷೆ

ದೇವಸ್ಥಾನದ ಹುಂಡಿ ಒಡೆದು ಕಳ್ಳತನ: 6 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ದೇವಸ್ಥಾನದ ಬಾಗಿಲ ಬೀಗ ಮುರಿದು ಕಾಣಿಕೆ ಹುಂಡಿ ಒಡೆದು ಕಳ್ಳತನ ಮಾಡಿದ್ದ ಅಪರಾಧಿಗೆ ಹಿರಿಯ ವ್ಯವಹಾರ ಹಾಗೂ ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ 20,000 ದಂಡ ವಿಧಿಸಿ ಆದೇಶಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಹೊಸಕೊಪ್ಪ ಸಮೀಪದ ಎ.ಜಿ. ಕಟ್ಟೆ ಬೇರುಕೊಡಿಗೆ ನಿವಾಸಿ ಮಂಜುನಾಥ ಶಿಕ್ಷೆಗೊಳಗಾದವರು.

ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಹೊಸಕೊಪ್ಪ ಚಂಗಾರು ಗ್ರಾಮದ ಉಮಾ ಮಹೇಶ್ವರ ದೇವಸ್ಥಾನದ ಬಾಗಿಲ ಬೀಗ ಮುರಿದು ಕಾಣಿಕೆ ಹುಂಡಿ ಒಡೆದು ಕಳ್ಳತನ ನಡೆದಿರುವ ಬಗ್ಗೆ 2021ರ ಜುಲೈ 7ರಂದು ದೇವಸ್ಥಾನ ಕಮಿಟಿಯ ಅಧ್ಯಕ್ಷರು ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಆಗುಂಬೆ ಠಾಣೆ ಸಬ್ ಇನ್‌ಸ್ಪೆಕ್ಟರ್ ಶಿವಕುಮಾರ್ ಪ್ರಕರಣದ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲೆ ಡಿ.ಜೆ. ಪ್ರೇಮಲೀಲಾ ವಾದ ಮಂಡಿಸಿದ್ದರು.

ಇದನ್ನೂ ಓದಿ; ಮೂಡಿಗೆರೆಯ ದೇವರುಮನೆಯಲ್ಲಿ ಸಿಕ್ಕ ಶವದ ಹಿಂದಿನ ಸ್ಟೋರಿ ಏನು? ಕೊಲೆಯಾಗಿದ್ದಾನೆ ಎನ್ನಲಾದ ಆತ ಯಾರು?

ಜಯಪುರ: “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರವನ್ನು ಜೂನ್ 11 ರ ಭಾನುವಾರ ಬೆಳಗ್ಗೆ 9:00 ನಡೆಸಲಾಗುವುದು ಎಂದು ಪತ್ರಿಕೆ ಹೇಳಿಕೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿಬ್ಳಿ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ನವಚೈತ್ರ ಸಾಂಸ್ಕೃತಿಕ ವೇದಿಕೆ ಕೊಪ್ಪ, ಮೇಗುಂದಾ ಹೋಬಳಿ ಪತ್ರಕರ್ತರು ಜಯಪುರ, ಗ್ರಾಮ ಪಂಚಾಯಿತಿ ಅಗಳಗಂಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಗಳಗಂಡಿ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಜಿಲ್ಲಾ ಅಂಧತ್ವ ನಿವಾರಣ ವಿಭಾಗ, ಕೊಪ್ಪ ತಾಲೂಕು ಆರೋಗ್ಯ ಕೇಂದ್ರ, ಅಗಳಗಂಡಿ ಸಮುದಾಯ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಿಂದ “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರವನ್ನು ಆಯೋಜಿಸಲಾಗಿದೆ.

ಜೂನ್ 11 ರ ಭಾನುವಾರ ಬೆಳಗ್ಗೆ 9:00 ರಿಂದ 1:00 ಗಂಟೆಯವರೆಗೆ ಅಗಳಗಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ಕಿಬ್ಳಿ ಪ್ರಸನ್ನ ಕುಮಾರ್ ಪತ್ರಿಕಾ ಹೇಳಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಕಣ್ಣಿನ ಚಿಕಿತ್ಸೆಗೆ ಒಳಪಡುವ ರೋಗಿಗಳು ತಪಾಸಣಾ ದಿನದಂದೇ ಆಸ್ಪತ್ರೆಗೆ ಹೋಗಲು ಸಿದ್ದರಿದ್ದಲ್ಲಿ ಉಚಿತ ಸಾರಿಗೆ, ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಶಸ್ತ್ರಚಿಕಿತ್ಸೆಯ ನಂತರ ಶಿಬಿರ ಸ್ಥಳಕ್ಕೆ ವಾಪಸು ಕರೆತಂದು ಬಿಡಲಾಗುತ್ತದೆಇನ್ನು ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಅಥವಾ ಯಾವುದಾದರೂ ಭಾವಚಿತ್ರವಿರುವ ಗುರುತಿನ ಚೀಟಿ ತರತಕ್ಕದ್ದು. ಈ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಬಳಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ 7795144239 ಸಂಪರ್ಕಿಸಬಹುದು.

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

Most Popular

Recent Comments