ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆ.
ಶೋಫಿಯಾನ್ ಜಿಲ್ಲೆಯ ಜೈನಾಪೋರಾದ ಕ್ರಾಲ್ಚೆಕ್ ಪ್ರದೇಶದಲ್ಲಿ ಈ ಘಟನೆ ಸಂಭವಸಿದೆ. ನಾಲ್ಕು ಮಂದಿ ಉಗ್ರರು ಏಕಾಎಕಿ ದಾಳಿ ನಡೆಸಿದ್ದಾರೆಂದು ತಿಳಿಸಿದ್ದಾರೆ.
ಭಯೋತ್ಪಾದಕರು ಸಿಆರ್‌ಪಿಎಫ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ, ಈ ಸಮಯದಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸಿಟಿ ಅಜಯ್ ಕುಮಾರ್ ಕೈಗೆ ಗುಂಡು ತಾಗಿ ಗಾಯವಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.
ಭಯೋತ್ಪಾದಕರು ಗುಂಡು ಹಾರಿಸಿದ ಕೂಡಲೇ ಸೇನಾಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದಾರೆ, ಈ ಸಮಯದಲ್ಲಿ ಒಂದು ಮ್ಯಾಗಜಿನ್ ನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.