ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆಯು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಬಂಡಿಪೋರಾದ ಚಂದಾಜಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆಯು ಕಾರ್ಯಾಚರಣೆಗಿಳಿದಿತ್ತು.
ಕಾರ್ಯಾಚರಣೆ ಆರಂಭಿಸುತ್ತಿದ್ದAತೆಯೇ ಅಡಗಿ ಕುಳಿತಿದ್ದಂತಹ ಉಗ್ರರು, ಸೇನಾಪಡೆ ಮೇಲೆ ಗುಂಡಿನ ದಾಳಿಯನ್ನು ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಸದೆಬಡಿದಿದ್ದಾರೆ.
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.