Sunday, September 24, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ಮದುಮಗಳು

ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ಮದುಮಗಳು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮದುಮಗಳೊಬ್ಬರು ಹಸೆಮಣೆ ಏರುವ ಮುನ್ನ ಮತದಾನ ಮಾಡುವ ಮೂಲಕ ಹಕ್ಕು ತಮ್ಮ ಚಲಾಯಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣಾ ಮತದಾನ ಇಂದು (ಬುಧವಾರ) ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ರಾಜ್ಯಾದ್ಯಂತ ಮತದಾನ ಬಿರುಸಿನಿಂದ ಸಾಗಿದೆ.

ಇದನ್ನೂ ಓದಿ; ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು: ಆರೋಪ!

ಇದನ್ನೂ ಓದಿ; ಶಾಸಕರು ಅನುದಾನ ತರದೇ ತಂದ ಅನುದಾನಗಳನ್ನು ತನ್ನ ಬೆಂಬಲಿಗರಿಗೆ ನೀಡಿದ್ದಾರೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಮದುಮಗಳು ಮತಚಲಾಯಿಸಿದ್ದು ವಿಶೇಷವಾಗಿತ್ತು. ಮೂಡಿಗೆರೆಯಲ್ಲಿ ಮದುವೆ ಇರುವ ಹಿನ್ನೆಲೆ ಹಸೆಮಣೆ ಏರುವ ಮೊದಲೇ ಕುಟುಂಬದ ಸದಸ್ಯರ ಜೊತೆಗೆ ಮದುಮಗಳು ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದ್ದಾರೆ. ಹಸೆಮಣೆಗೂ ಮುನ್ನ ತಮ್ಮ ಜವಾಬ್ದಾರಿ ಮೆರೆದ ಮಧುಮಗಳು ಮದುವೆ ಸಂದರ್ಭದಲ್ಲೂ ಮತದಾನ ಮಾಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ. 

ರಂಭಾಪುರಿ ಶ್ರೀಗಳ ಮೊದಲ ಮತದಾನದ ಬಳಿಕ ಉಳಿದವರು ಮತದಾನ:
ಚಿಕ್ಕಮಗಳೂರು: ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ವೀರಸೋಮೇಶ್ವರ ಮಹಾಸ್ವಾಮಿಜಿಗಳು ಸಂದೇಶ ನೀಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 209 ರಲ್ಲಿ ಮತದಾನ ಮಾಡಿದ ಶ್ರೀಗಳು ನಾಡಿನ ಜನತೆಗೆ ಸಂದೇಶ ಸಾರಿದ್ದಾರೆ.

ಬಾಳೆಹೊನ್ನೂರಿನ ಮತಗಟ್ಟೆಯಲ್ಲಿ ಶ್ರೀಗಳ ಮತದಾನ ಬಳಿಕ ಉಳಿದವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ಪದ್ಧತಿ, ಏಳು ಗಂಟೆಗೆ ಮೊದಲ ಮತದಾನ ಮಾಡಿದ ರಂಭಾಪುರಿ ಶ್ರೀಗಳು ಬಳಿಕ ನಾಡಿನ ಸಮಸ್ತ ಜನತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು; ಚುನಾವಣೆ ಬಹಿರಂಗ ಪ್ರಚಾರ ಅಂತ್ಯ

80 ವರ್ಷದ ವೃದ್ಧೆಯಿಂದಲು ಮತದಾನ:
ಚಿಕ್ಕಮಗಳೂರು: ಸಿ.ಟಿ.ರವಿ ಬೂತ್ ನಲ್ಲಿ ಮೊದಲ ಮತದಾನ ಮಾಡಿದ್ದು, 80 ವರ್ಷದ ವೃದ್ಧೆಯಿಂದಲು ಮತಚಲಾಯಿಸಿದರು. ಚಿಕ್ಕಮಗಳೂರು ನಗರದಲ್ಲಿ ತರಕಾರಿ ಮಾರುವ ವೃದ್ಧೆ ಕಣ್ಣಮ್ಮರಿಂದ ಮತದಾನದ ಮಾಡಿ ಎಲ್ಲರ ಗಮನ ಸೆಳೆದರು.

ಚುನಾವಣಾ ಕರ್ತವ್ಯಕ್ಕೆ ಲೋಪ; ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಮಾನತ್ತು

ಶೃಂಗೇರಿ: ಚುನಾವಣಾ ಕರ್ತವ್ಯಕ್ಕೆ ಲೋಪವನ್ನುಂಟು ಮಾಡಿ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತ್ತುಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಪುಟ್ಟೇಗೌಡ ಅಮಾನತ್ತು ಆದ ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿಗಳ ಮುಂದೆ ಅವಾಚ್ಯ ಪದಗಳನ್ನು ಬಳಸಿ ಅವರುಗಳಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ.

ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28 (ಎ) ಮತ್ತು 136 ರಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

Most Popular

Recent Comments