ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮನೆಯ ಪಕ್ಕದ ಶೆಡ್ ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಧರೆಗುರುಳಿದ ಬೃಹತ್ ಮರ, ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಟಿಪ್ಪರ್
ನಿನ್ನೆ ರಾತ್ರಿ ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಕಾರು ಜಖಂಗೊಳಿಸಿದೆ. ನಿನ್ನೆ ರಾತ್ರಿ ಸಮಯ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಆನೆ ಮನೆ ಬಳಿ ಬಂದು ಶೆಡ್ ಅನ್ನು ಪೂರ್ಣ ಬೀಳಿಸಿದೆ ಹಾಗೆಯೇ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದೆ. ಕಾರಿನ ಹಿಂಭಾಗದ ಗ್ಲಾಸ್ ಸಂಪೂರ್ಣ ಪುಡಿಯಾಗಿದೆ. ಶೆಡ್ ಮತ್ತು ಕಾರು ಜಖಂ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಅಡಿಕೆ ರೇಟ್ ಯಾವಾಗ ಎಷ್ಟಿತ್ತು? ಚೆಕ್ ಮಾಡೋದು ಹೇಗೆ?
- ಕಲುಷಿತವೋ.. ವಿಷವೋ? ಕೆರೆಯಲ್ಲಿ ಸಾವಿರಾರು ಮೀನುಗಳು ಸಾವು
- ವಿಚಾರಣೆ ನೆಪದಲ್ಲಿ ಮೂಡಿಗೆರೆ ಬಿಜೆಪಿ ಮುಖಂಡನಿಗೆ ಪೊಲೀಸರಿಂದ ದೌರ್ಜನ್ಯ?
ಸ್ಥಳಕ್ಕೆ ಮೂಡಿಗೆರೆಯ ಅರಣ್ಯ ಇಲಾಖೆ ಆನೆ ಕಾರ್ಯಪಡೆ ಸಿಬ್ಬಂದಿಗಳಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ; ಬಾರೀ ಮಳೆಯ ಎಚ್ಚರಿಕೆ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಬಾರೀ ಮಳೆಯ ಎಚ್ಚರಿಕೆ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ. ಜು. 5, 6 ಹಾಗೂ 7 ರಂದು ಹೈ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.