ಹಾಸನ: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಗಿಡಗಳನ್ನು ಕತ್ತರಿಸಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿ, ಸಹೋದರನ ಮಗನ ಕೈ-ಕಾಲುಗಳನ್ನು ಕತ್ತರಿಸಿದ ಘಟನೆ ಹಾಸನ ತಾಲೂಕಿನ ದುದ್ರ ಸಮೀಪದ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಬೈಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ವಿಧಾನಸಭೆಗೆ ಮತದಾನ ನಡೆದ ರಾತ್ರಿ ಮೇ 10ರಂದು ಅಡಿಕೆ ಮರಗಳನ್ನು ಕಡಿದು ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಗಣ್ಣ ಎಂಬುವರಿಗೆ ಸೇರಿದ 50 ರಿಂದ 60 ಗಿಡಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಕಡಿದು ಹಾಕಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೋಲಿನ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸಿ.ಟಿ.ರವಿ
- ಸಿ.ಟಿ ರವಿಯನ್ನು ಸೋಲಿಸಿದ ಕಾಂಗ್ರೆಸ್ನ ತಮ್ಮಯ್ಯ
- ಚುನಾವಣೆಯಲ್ಲಿ ಸೋತ ಸಿ.ಟಿ ರವಿಗೆ ಧೈರ್ಯ ತುಂಬಿದ ಬಾಲಕ
ಮಾಲೀಕ ಜಗದೀಶ್ ಮೇ 11ರಂದು ಎಂದಿನಂತೆ ತೋಟಕ್ಕೆ ಹೋದಾಗ ಘಟನೆ ಗೊತ್ತಾಗಿದೆ. ಒಂದೆರಡು ವರ್ಷಗಳಲ್ಲಿ ಫಸಲು ಕೊಡಬೇಕಿಗಿದ್ದ ಅಡಿಕೆ ಗಿಡಗಳನ್ನು ನಾಶಪಡಿಸಿದ್ದರಿಂದ ಜಗಣ್ಣ ಕಣ್ಣೀರು ಹಾಕಿದ್ದರು. ಇರುವ ಅಲ್ಪಸ್ವಲ್ಪ ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದೆವು, ರಾಜಕೀಯ ಕುತಂತ್ರದಿಂದ ಇಂಥ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಎಷ್ಟೇ ದ್ವೇಷವಿದ್ದರೂ ಇಂತಹ ಹೀನಾಯ ಕೃತ್ಯಕ್ಕೆ ಯಾರೂ ಕೈ ಹಾಕಬಾರದು. ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪರಿಹಾರವನ್ನೂ ನೀಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.
ಇದನ್ನೂ ಓದಿ; ಭೀಕರ ಅಪಘಾತ, ಅತ್ತೆ-ಸೊಸೆ ಸಾವು
ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ
ಸ್ಥಳಕ್ಕೆ ಆಗಮಿಸಿದ ದುದ್ದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತವಿಖೆ ಕೈಗೊಂಡಿದ್ದರು. ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಜಗಣ್ಣ ಜೋತಿಷಿಯೊಬ್ಬರ ಬಳಿ ತೆರಳಿ ಕೃತ್ಯ ನಡೆಸಿದ್ದು ಯಾರು ಎಂದು ಕೇಳಿದ್ದಾರೆ. ಜ್ಯೋತಿಷಿ, ನಿಮ್ಮ ದಾಯಾದಿಗಳೇ ಕೃತ್ಯವೆಸಗಿದ್ದಾರೆ ಎಂದು ಹೇಳಿದ್ದಾರೆ ಎಂಬ ಮಾಹಿತಿ ವಿಶ್ವಸನೀಯ ಮೂಲಗಳಿಂದ ದೊರೆತಿದೆ.
ಇದನ್ನು ನಂಬಿದ ಜಗದೀಶ್ ಮೇ 14ರ ಸಂಜೆ ಅಭಿ ಎಂಬಾತನೊಂದಿಗೆ ಸೇರಿ ಜಮೀನಿನ ಮನೆಗೆ ತೆರಳುತ್ತಿದ್ದ ಸಹೋದರನ ಮಗ ಚೇತನ್ ಕುಮಾರ್‌ನನ್ನು ಅಡಗಟ್ಟಿದ್ದಾರೆ. ಆತನ ಕೈ ಮತ್ತು ಕಾಲನ್ನು ಮಾರಕಾಸ್ತ್ರಗಳಿಂದ ಕಡಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳೀಯರು ಗಮನಿಸಿ ಕೂಡಲೇ ಚೇತನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಪರಿಸ್ಥಿತಿಯಲ್ಲೇ ಚೇತನ್ ವಿಡಿಯೋದಲ್ಲಿ ಮಾತನಾಡಿ, “ನನ್ನ ಮೇಲೆ ಜಗದೀಶ್ ಮತ್ತು ಅಭಿ ಎಂಬುವರು ಹಲ್ಲೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ; ಸೋಲಿನಿಂದ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳುವುದಿಲ್ಲ
ಚೇತನ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಜಗದೀಶ್ ಮತ್ತು ಅಲ್ಲಿ ತಲೆಮರೆಸಿಕೊಂಡಿದ್ದಾರೆ.