ಉಡುಪಿಯಿಂದ ಮಹಿಳೆ ನಾಪತ್ತೆ: ದೂರು ದಾಖಲು

ಶಿವಮೊಗ್ಗ/ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶುಭಾ.ಕೆ (38) ನಾಪತ್ತೆಯಾದ ಮಹಿಳೆ.

ಇದನ್ನೂ ಓದಿ; ಹಿಟ್‌ ಅಂಡ್‌ ರನ್‌; ತಪ್ಪಿದ ಭಾರಿ ಅನಾಹುತ

ಇದನ್ನೂ ಓದಿ; ವಿದ್ಯುತ್‌ ತಂತಿ ತಗುಲಿ ಕಾಡಾನೆ ಸಾವು

ಬಹ್ರೇನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶುಭಾ ಮೂಲತಃ ಶಿವಮೊಗ್ಗದವರು. ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಹಿಳೆಯ ಗಂಡ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ; ಸಂಸತ್ ಭವನದ ಉದ್ಘಾಟನೆಗೆ ಶೃಂಗೇರಿ ಪೀಠದ ಪುರೋಹಿತರು

ಇವರು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಸಂಪರ್ಕಿಸಲು ಸೂಚಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.

ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.