Sunday, October 1, 2023
Homeಮಲೆನಾಡುಚಿಕ್ಕಮಗಳೂರುಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಜಿಕೆ (ಮಂಜು, 11 ವರ್ಷ) ಮೃತ ಪಟ್ಟ ಯುವಕ.

ಇದನ್ನೂ ಓದಿ; ಕಾಂಗ್ರೆಸ್ ಮುಖಂಡನ ತಾಯಿ ನೇಣು ಬಿಗಿದು ಆತ್ಮಹತ್ಯೆ

ಗೌಡನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ನಿಖಿಲ್, ಬೇಸಿಗೆ ರಜೆ ಇದ್ದ ಕಾರಣ ನಿನ್ನೆ ಗೌಡನಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಶಾಲೆಗೆ ರಜೆ ಇರುವ ಕಾರಣ ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರವಹಿಸಬೇಕಾಗಿದ್ದು. ಈಜಲು ಹೋಗಿ ನೀರು ಪಾಲಾಗಿರುವ ಘಟನೆಗಳು ಈ ಹಿಂದೆ ಕೂಡ ಬಾಳೆಹೊನ್ನೂರಿನಲ್ಲಿ ನಡೆದಿದೆ. ಆಯಾ ತಪ್ಪಿ ಬಿದ್ದ ಮಗನನ್ನು ಕಾಪಾಡಲು ನದಿಗೆ ಹಾರಿದ ತಂದೆ ಮಗ ಇಬ್ಬರನ್ನೂ ಬಲಿ ಪಡೆದ ಘಟನೆ ಕೂಡ ವರದಿಯಾಗಿತ್ತು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಮಾಗುಂಡಿ ಸಮೀಪ ಭದ್ರ ನದಿಯಲ್ಲಿ ಮುಳುಗಿ ತಂದೆ ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ್(40 ವರ್ಷ) ಮತ್ತು ಅವರ ಮಗ ಸಾತ್ವಿಕ್(13 ವರ್ಷ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ; ಶೃಂಗೇರಿ ಕ್ಷೇತ್ರದಿಂದ ಮಲ್ನಾಡ್ ಕೇಸರಿ ಸೇನೆಯ ಪುನೀತ್ ಪೂಜಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ.!

ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ್ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ತೆರಳಿದ್ದರು.

ಮನೆಯ ಸಮೀಪದಲ್ಲೇ ಹರಿಯುತ್ತಿರುವ ಭದ್ರ ನದಿಯ ಬಳಿಗೆ ತೆರಳಿದ್ದಾರೆ. ಹೊಳೆಯಲ್ಲಿ ಬಂಡೆಯೊಂದರ ಮೇಲೆ ನಿಂತಿದ್ದ ಸಾತ್ವಿಕ್ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ಮಗನನ್ನು ರಕ್ಷಿಸಲು ತಂದೆ ಲೋಕೇಶ್ ಸಹ ನದಿಗೆ ಹಾರಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಟ್ರ‍್ಯಾಕ್ಟರ್‌ನ ಹಿಂಬದಿ ಡಾಬರ್ ರಾಡ್‌ಗೆ ತಲೆ ತಾಗಿ ಒಂದೂವರೆ ವರ್ಷದ ಮಗು ಸಾವು

ಕುಟುಂಬದವರ ಕಣ್ಣೆದುರೆ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಸಂಬಂಧಿಕರು ನಡೆಸಿದ ಪ್ರಯತ್ನ ವಿಫಲವಾಗಿದೆ.

ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Most Popular

Recent Comments